News Karnataka Kannada
Tuesday, April 16 2024
Cricket
ಬೆಂಗಳೂರು ನಗರ

ಕರ್ನಾಟಕದಲ್ಲಿ ಮಂಗಳವಾರ 31,830 ಮಂದಿಗೆ ಕೊರೊನಾ ಸೋಂಕು, 180 ಸಾವು

Photo Credit :

ಕರ್ನಾಟಕದಲ್ಲಿ ಮಂಗಳವಾರ 31,830 ಮಂದಿಗೆ ಕೊರೊನಾ ಸೋಂಕು, 180 ಸಾವು

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ (ಏಪ್ರಿಲ್ 27) ಒಟ್ಟು 31,830 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 180 ಜನರು ಕೋವಿಡ್-19ರಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 17,550 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 97 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು ಹೊಸದಾಗಿ 31,830 ಜನರಿಗೆ ಕೊರೊನಾ ದೃಢಪಡುವುದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 14,00,775ಕ್ಕೆ (14 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 180 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದ್ದವರ ಸಂಖ್ಯೆ 14,807ಕ್ಕೆ ಮುಟ್ಟಿದೆ. ಸೋಂಕಿತರ ಪೈಕಿ 10,84,050 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,01,899 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಇಂದು 17,550 ಜನರಲ್ಲಿ ಸೋಂಕು ದೃಢಪಟ್ಟಿದ್ದು, 97 ಜನರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 6,002ಕ್ಕೆ ಮುಟ್ಟಿದೆ. ಸೋಂಕಿತರ ಒಟ್ಟು ಸಂಖ್ಯೆ 6,87,751 ಮುಟ್ಟಿದೆ. ಈ ಪೈಕಿ 4,75,525 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,06,223 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 180. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 97 ಜನರು ಸಾವನ್ನಪ್ಪಿದ್ದಾರೆ. ಬಳ್ಳಾರಿ 18, ಮೈಸೂರು 9, ಕಲಬುರಗಿ 7, ರಾಮನಗರ 6, ಹಾಸನ, ಧಾರವಾಡ, ಬೀದರ್​ ಜಿಲ್ಲೆಯಲ್ಲಿ ತಲಾ ಐವರು, ವಿಜಯಪುರ 4, ತುಮಕೂರು, ಹಾವೇರಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಮೂವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ, ರಾಯಚೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿಂದು ಹೊಸದಾಗಿ 31,830 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಮಂದಿಗೆ 17,550 ಸೋಂಕು ದೃಢಪಟ್ಟಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಅಲ್ಲಿ ಇಂದು 2,042 ಜನರಲ್ಲಿ ಸೋಂಕು ದೃಢಪಟ್ಟಿದೆ. ತುಮಕೂರು ಜಿಲ್ಲೆಯಲ್ಲಿಯೂ ಸತತವಾಗಿ ಸೋಂಕಿತರ ಸಂಖ್ಯೆ ಒಂದು ಸಾವಿರ ದಾಟುತ್ತಿದೆ. ತುಮಕೂರಿನಲ್ಲಿ ಇಂದು 1,196 ಜನರಲ್ಲಿ ಸೋಂಕು ದೃಢಪಟ್ಟಿದೆ.
ಬಳ್ಳಾರಿ 907, ಕಲಬುರಗಿ 772, ಮಂಡ್ಯ 737, ರಾಯಚೂರು 736, ಬೆಂಗಳೂರು ಗ್ರಾಮಾಂತರ 599, ಕೋಲಾರ 548, ಚಿಕ್ಕಬಳ್ಳಾಪುರ 544, ವಿಜಯಪುರ 531, ಹಾಸನ 503, ಉಡುಪಿ 477, ಯಾದಗಿರಿ 414, ದಕ್ಷಿಣ ಕನ್ನಡ 486, ಧಾರವಾಡ 423, ಕೊಪ್ಪಳ 382, ಕೊಡಗು 373, ಬೀದರ್ 328, ದಾವಣಗೆರೆ 300, ಬಾಗಲಕೋಟೆ 283, ಚಿಕ್ಕಮಗಳೂರು 275, ಶಿವಮೊಗ್ಗ 256, ಬೆಳಗಾವಿ 219, ಚಾಮರಾಜನಗರ 212, ಉತ್ತರ ಕನ್ನಡ 205, ರಾಮನಗರ 169, ಚಿತ್ರದುರ್ಗ 145, ಗದಗ 119, ಹಾವೇರಿ 99 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು