News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಾಳೆಯಿಂದ ಬೆಂಗಳೂರು ಆರ್ಟ್ಸ್‌-ಕ್ರಾಫ್ಟ್‌ ಮೇಳ

Mela
Photo Credit : News Kannada

ಬೆಂಗಳೂರು, ಮೇ.5 : ನಾಳೆಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ದೇಶದ ವಿವಿಧ ಭಾಗಗಳ ಕಲಾವಿದರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಬೆಂಗಳೂರು ಆರ್ಟ್ಸ್‌ & ಕ್ರಾಫ್ಟ್‌ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳವನ್ನು ನಟಿಯರಾದ ಸಿಂಧೂ ಗೌಡ ಮತ್ತು ನಿಧಿ ರಾವ್‌ ಉದ್ಘಾಟಿಸಲಿದ್ದಾರೆ.

ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ.

80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 96118 35597

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು