News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯ ಮುನ್ಸೂಚನೆ

Photo Credit :

ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, : ಕರ್ನಾಟಕ ಸೇರಿದಂತೆ 4 ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ತಮಿಳುನಾಡಿನ ಒಳನಾಡಿನ ಜಿಲ್ಲೆಗಳಲ್ಲಿ ಸಾಕಷ್ಟು ಮಳೆಯಾಗಲಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್. ಪ್ರಕಾಶ್ ತಿಳಿಸಿದರು.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿದಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಏ.24ರ ವರೆಗೂ ಮುಂದುವರಿಯುವ ಮುನ್ಸೂಚನೆಗಳಿವೆ ಎಂದು ಹೇಳಿದರು.ಕರ್ನಾಟಕದ 9 ಜಿಲ್ಲೆಗಳಿಗೆ ಮಳೆಯ ಎಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ತುಮಕೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾರಂಗಿ, ಮೂರ್ನಾಡು, ಕುಣಿಗಲ್, ಭಾಗಮಂಡಲ, ಸಿದ್ದಾಪುರ, ಸಾಗರ,ಕುಶಾಲನಗರ, ಮದ್ದೂರು, ಸುಬ್ರಹ್ಮಣ್ಯ, ಸುಳ್ಯ, ಮಳವಳ್ಳಿ, ಸೋಮವಾರಪೇಟೆ, ಹಳೆಬೀಡು, ಹಿರಿಯೂರು, ಮಲವಳ್ಳಿ, ಭರಮಸಾಗರ, ಥೊಂಡೆಬಾವಿಯಲ್ಲಿ ಮಳೆಯಾಗಿದೆ.ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, 34 ಡಿಗ್ರಿ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದದೆ. ನಗರದಲ್ಲಿ 34.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.
ಪಂಜಾಬ್‌ನಲ್ಲಿ ಚಂಡಮಾರುತ ಶುರುವಾಗುತ್ತಿದ್ದು, ಅದರ ಪರಿಣಾಮ ದೆಹಲಿ, ಒಡಿಶಾ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ. ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಮಣಿಪುರ, ಸಿಕ್ಕಿಂ, ತ್ರಿಪುರಾ, ಕೇರಳ, ಪಶ್ಚಿಮ ಬಂಗಾಳ, ತೆಲಂಗಾಣ, ಉತ್ತರ ಪ್ರದೇಶ,ಪಪಂಜಾಬ್, ಹರ್ಯಾಣ, ತಮಿಳುಣಾಡು, ಕರ್ನಾಟಕ, ಅಂಡಮಾನ್ ನಿಕೋಬಾರ್‌ನಲ್ಲಿ ಕೂಡ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು