News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಕಲ್ಯಾಣ ಮಿತ್ರ ಸಹಾಯವಾಣಿಗೆ ಸಿಎಂ ಚಾಲನೆ

Cm
Photo Credit :

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಹಲವು ಯೋಜನೆಗಳ ಮಾಹಿತಿಯನ್ನು ಒಂದೇ ಸೂರಿನಡಿ ಒದಗಿಸುವ “ಕಲ್ಯಾಣ ಮಿತ್ರ” ಸಹಾಯವಾಣಿ ಸಂಖ್ಯೆ 9482300400 ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿಂದು ಆಯೋಜಿಸಲಾಗಿದ್ದ “ಕಲ್ಯಾಣ ಮಿತ್ರ”(ಏಕೀಕೃತ ಎಸ್.ಸಿ., ಎಸ್.ಟಿ. 24×7 ಸಹಾಯವಾಣಿ) ಉದ್ಘಾಟನೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ವೃತ್ತಿ ಸಾಮರ್ಥ್ಯ ಅಭಿವೃದ್ಧಿ

ಕಾರ್ಯಾಗಾರವನ್ನು ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಮಹರ್ಷಿ ವಾಲ್ಮೀಕಿ, ಡಾ. ಬಿ.ಆರ್.ಅಂಬೇಡ್ಕರ್ ಮತ್ತು  ಡಾ. ಬಾಬು ಜಗಜೀವನ ರಾಂ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಿಸಲು ಅಧಿಕಾರಿಗಳು, ನೌಕರರು ವಿಳಂಬ ಧೋರಣೆ ತೋರದೆ, ಪ್ರಾಮಾಣಿಕವಾಗಿ, ಪಾರದರ್ಶಕವಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಇತ್ತೀಚೆಗೆ ಎಸ್.ಸಿ., ಎಸ್.ಸಿ. ಫಲಾನುಭವಿಗಳಿಗೆ ಭೂ ಒಡೆತನ ಯೋಜನೆಯಡಿ ಭೂಮಿ ಖರೀದಿಯ ಮೊತ್ತವನ್ನು ರೂ. 15 ಲಕ್ಷಗಳಿಂದ ರೂ. 20 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಮನೆ ನಿರ್ಮಾಣದ ವೆಚ್ಚವನ್ನು ರೂ. 1.75 ಲಕ್ಷದಿಂದ ರೂ. 2 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಸ್.ಸಿ., ಎಸ್.ಸಿ. ರೈತರಿಗೆ 75 ಯೂನಿಟ್ ಗಳ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ. ಇಂತಹ ಹಲವಾರು ಯೋಜನೆಗಳನ್ನು ದೀನದಲಿತರ ಅಭಿವೃದ್ಧಿಗಾಗಿ ಸರ್ಕಾರವು ಜಾರಿಗೊಳಿಸಿದ್ದು ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಿ, ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸಹಕಾರಿಯಾಗುವಂತೆ  ಕಾರ್ಯಾಂಗದಲ್ಲಿ ಕಾರ್ಯನಿರ್ವಹಿಸುವವರು ಜವಾಬ್ದಾರಿಯಿಂದ ನುಣುಚಿಕೊಳ್ಳದೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ತಿಳಿಸಿದರು.

ಪ್ರಸ್ತುತವಾಗಿ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಒತ್ತಡದಲ್ಲಿ, ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಿದ್ದು ಇನ್ನು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಇಂತಹ ವೃತ್ತಿ ಸಾಮರ್ಥ್ಯ ಕಾರ್ಯಾಗಾರಗಳು ಉಪಯೋಗವಾಗಲಿದೆ  ಎಂದರು.

ಕಾರ್ಯಕ್ರಮದಲ್ಲಿ ಪರ್ವತಾರೋಹಣ ಹಾಗೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ತೋರಿದ ಐವರು ವಿದ್ಯಾರ್ಥಿನಿಯರನ್ನು ಮುಖ್ಯಮಂತ್ರಿಯವರು ಅಭಿನಂದಿಸಿ, ಸನ್ಮಾನಿಸಿದರು ಹಾಗೂ ಐವರು ವಿದ್ಯಾರ್ಥಿನಿಯರಿಗೆ ತಲಾ ಐದು ಲಕ್ಷ ರೂಪಾಯಿಗಳ  ಪ್ರೋತ್ಸಾಹಧನದ ಚಿಕ್ ಅನ್ನು ವಿತರಿಸಿದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾದ ಡಾ. ಕೆ.ರಾಕೇಶ್ಕುಮಾರ್ ಅವರು ಸ್ವಾಗತಿಸಿದರು. ಅಪರ  ನಿರ್ದೇಶಕರಾದ ಸತ್ಯಶ್ರೀ ಅವರು ವಂದಿಸಿದರು.

ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ, ಸರ್ಕಾರಿ ಮುಖ್ಯ ಸಚೇತಕರಾದ ವೈ.ಎ.ನಾರಾಯಣಸ್ವಾಮಿ, ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹೆಚ್.ನಾಗೇಶ್, ಶಾಸಕರುಗಳಾದ ರಾಮಪ್ಪ ಲಮಾಣಿ, ಅ.ದೇವೇಗೌಡ,  ಎನ್.ರವಿಕುಮಾರ್, ಎಸ್.ಸಿ., ಎಸ್.ಟಿ. ಕಾರ್ಯಕ್ರಮಗಳ ನೋಡಲ್ ಸಲಹೆಗಾರರಾದ ಡಾ. ಟಿ.ವೆಂಕಟಯ್ಯ,  ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಮಾಜ  ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಸೇರಿದಂತೆ ಹಿರಿಯ ಅಧಿಕಾರಿಗಳು, ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು