News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ; ಸಚಿವ ಆರಗ ಜ್ಞಾನೇಂದ್ರ

Araga Jnanendra
Photo Credit :

ವಿಧಾನ ಸೌಧ : ಎಲ್ಲವನ್ನೂ ಕೂಡ ನಿಯಮದ ಅಡಿಯಲ್ಲೇ ಮಾಡಬೇಕಾಗುತ್ತದೆ. ಒಂದು ಬಸ್ ಓಡಿಸುವುದಕ್ಕೂ ಕೂಡ ಒಂದು ಡೆಸಿಬಲ್ ಲಿಮಿಟ್ ಅಂತ ಇರುತ್ತದೆ. ಸುಪ್ರಿಂ ಕೋರ್ಟ್ ಆದೇಶ ಪ್ರಕಾರವೇ ನಡೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ. ಸ್ವಾತಂತ್ರ್ಯ ಬಂದಾಗಿನಿಂದ ಓಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಬಂದಿದ್ದಾರೆ. ಓಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಸಿಂಹಾಸನದ ಮೇಲೆ ಕೂತಿದ್ದಾರೆ. ಹಿಜಾಬ್, ಹಲಾಲ್ ವಿಚಾರಗಳಲ್ಲಿ ಕಾಂಗ್ರೆಸ್ ತನ್ನ ನಿಲುವು ಏನು ಅನ್ನುವುದನ್ನು ಸ್ಪಷ್ಟವಾಗಿ ಹೇಳಬೇಕಲ್ಲ ಎಂದು ವಾಗ್ದಾಳಿ ನಡೆಸಿದರು.

ಡಿಕೆಶಿವಕುಮಾರ್ ಈ ಬಗ್ಗೆ ಮಾತನಾಡಬೇಡಿ ಅಂತ ಹೇಳುತ್ತಾರೆ ಅಂದ್ರೆ ಏನರ್ಥ? ಕಾಂಗ್ರೆಸ್ ಗೆ ಓಟ್ ಬ್ಯಾಂಕ್ ಸ್ವಲ್ಪ ಅಲುಗಾಡಿದರೂ ಒತ್ತಡ ಆಗಿಬಿಡುತ್ತದೆ ಎಂದರು.

ಸ್ಥಳೀಯ ಪೊಲೀಸರು ಎಲ್ಲಿ ಸುಪ್ರಿಂ ಕೋರ್ಟ್ ಆದೇಶ ಉಲ್ಲಂಘನೆ ಆಗಿದೆ ಅಂಥ‌ ನೋಡಿಕೊಳ್ಳುತ್ತಾರೆ. ಲಾ ಆಯಂಡ್ ಆರ್ಡರ್ ಉಲ್ಲಂಘನೆ ಆಗದಂತೆ ನೋಡಿಕೊಳ್ಳುತ್ತೇವೆ. ಸಭೆ ನಡೆಸುವುದು ನೊಟೀಸ್ ನೀಡುವುದು ಎಲ್ಲವೂ ಸ್ಥಳೀಯ ಪೊಲೀಸರು ಮಾಡುತ್ತಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು