News Karnataka Kannada
Saturday, April 13 2024
Cricket
ಬೆಂಗಳೂರು ನಗರ

ಕಾಂಗ್ರೆಸ್ ನಿಂದ ರಾಜ್ಯಮಟ್ಟದ ಕೋವಿಡ್ ಸೆಂಟರ್ ರಚಿಸುತ್ತೇವೆ: ಡಿ ಕೆ ಶಿವಕುಮಾರ್

Photo Credit :

ಕಾಂಗ್ರೆಸ್ ನಿಂದ ರಾಜ್ಯಮಟ್ಟದ ಕೋವಿಡ್ ಸೆಂಟರ್ ರಚಿಸುತ್ತೇವೆ: ಡಿ ಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್​​ನಿಂದ ರಾಜ್ಯಮಟ್ಟದ ಕೋವಿಡ್​ ಸೆಂಟರ್ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಿಗೆ ಔಷಧಿ ಸರಬರಾಜು ಆಗುತ್ತಿಲ್ಲ ಅವರ ಸಹಾಯಕ್ಕೂ ಕಾಂಗ್ರೆಸ್ ನಿಲ್ಲುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಯದಲ್ಲಿ ಯಾವ ರೀತಿ ಜವಾಬ್ದಾರಿ ನಿಭಾಯಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಸುರ್ಜೇವಾಲಾ ಸಲಹೆ ನೀಡಿದ್ದಾರೆ. ಆಸ್ಪತ್ರೆಗಳ ಮಾಹಿತಿ ಹೇಗೆ ಪಡೆಯಬೇಕು. ಸಾಮಾನ್ಯ ಜನರಿಗೆ ಹೇಗೆ ಸಹಾಯ ಮಾಡಬೇಕು ಎಂದು ನಮ್ಮ ನಾಯಕರಿಗೆ ಸಲಹೆ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಏಕಾಏಕಿಯಾಗಿ ಲಾಕ್​​ಡೌನ್ ಘೋಷಣೆ ಮಾಡಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ, ಹೀಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ನೀಡಬೇಕು.

ಈ ಬಗ್ಗೆ ಯಾವ ರೀತಿ ಒತ್ತಾಯ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಇಂತಹ ಸಮಯದಲ್ಲಿ ಅಕ್ಕಿ ಪ್ರಮಾಣ ಕಡಿತ ಮಾಡಿರುವ ಸರ್ಕಾರಕ್ಕೆ ನಾಚಿಕೆ ಆಗಬೇಕು. ಇದಕ್ಕಿಂತ ದುರಂತಕ್ಕೆ ‌ಮತ್ತೊಂದಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು