News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಕೃತಕ ಬೆಡ್ ಅಭಾವ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

Photo Credit :

ಕೃತಕ ಬೆಡ್ ಅಭಾವ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಹಿರಂಗಪಡಿಸಿದ್ದು, ಇವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. 

 

ಕೊರೋನಾ ಕಾಲದಲ್ಲೂ ಜನರ ಜೀವದ ಜೊತೆ ಆಟಾಡುತ್ತಿರುವ ಹಾಗೂ ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.  

 

ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡುತ್ತಿರುವ ಮಾಫಿಯಾವನ್ನು ತೇಜಸ್ವಿ ಸೂರ್ಯ ಸಾಕ್ಷ್ಯ ಸಮೇತವಾಗಿ ಬಹಿರಂಗಗೊಳಿಸಿದ್ದಾರೆ.

 

“ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಬೆಡ್ ಹಂಚಿಕೆ, ವಿಧಾನ, ಸಮಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಬಿಬಿಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿಗಳ ಅವ್ಯವಹಾರವನ್ನು ಬಯಲಿಗೆಳೆದಿದೆ.

 

ತನಿಖೆ ನಡೆಸಿದಾಗ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮಿತ್ರ ಸಿಬ್ಬಂದಿ ಬಿಬಿಎಂಪಿ ಹೆಲ್ಪ್ ಲೈನ್ ಹಾಗೂ ಬೆಡ್ ಹಂಚಿಕೆಗೆ ನಿಯುಕ್ತರಾಗಿರುವ ಸಿಬ್ಬಂದಿಗಳು ಕೆಲವು ಖಾಸಗಿ ಆಸ್ಪತ್ರೆಗಳು ಸೇರಿ ಕೃತಕ ಬೆಡ್ ಅಭಾವ ಸೃಷ್ಟಿಸಿ ಸಾರ್ವಜನಿಕರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವುದು ಕಂಡುಬಂಡಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು