News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ಕೊರೋನಾ ಪೀಡಿತರಿಗೆ ಬಸ್ಸಿನಲ್ಲಿಯೇ ತ್ವರಿತ ಆಮ್ಲಜನಕ ವ್ಯವಸ್ಥೆ

Photo Credit :

ಕೊರೋನಾ ಪೀಡಿತರಿಗೆ ಬಸ್ಸಿನಲ್ಲಿಯೇ ತ್ವರಿತ ಆಮ್ಲಜನಕ ವ್ಯವಸ್ಥೆ

ಬೆಂಗಳೂರು : ರಾಜ್ಯದಲ್ಲಿ ಹೊಸಾ ಪ್ರಜೋಗಕ್ಕೆ ಮುಂದಾದ ಬಿ.ಎಂ.ಟಿ.ಸಿ.. ಆಮ್ಲಜನಕಕ್ಕಾಗಿ ಪರಿತಪಿಸುವುದನ್ನು ತಪ್ಪಿಸಲು ಖಾಸಗಿ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ ಬಿ.ಎಂ.ಟಿ.ಸಿ. ಸಂಸ್ಥೆಯು ಪ್ರಾಯೋಗಿಕವಾಗಿ ಸಂಚಾರಿ ಆಮ್ಲಜನಕ ಘಟಕವೊಂದನ್ನು ತೆರೆದಿದ್ದು , ಗುರುವಾರದಿಂದ ( ಮೇ 13 ) ಸೇವೆಗೆ ಲಭ್ಯವಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ . 

 

ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಮ್ಲಜನಕ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ . ಇದನ್ನು ತಪ್ಪಿಸುವ ಉದ್ದೇಶದಿಂದ ಬಸ್ಸಿನಲ್ಲಿಯೇ ತುರ್ತು ಆಮ್ಲಜನಕ ಸೌಲಭ್ಯ ಒದಗಿಸಲು ಈ ನೂತನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಸವದಿ ವಿವರಿಸಿದ್ದಾರೆ . ಆಮ್ಲಜನಕ ಪೂರೈಸುವ ಈ ವಿಶೇಷ ಬಸ್ಸನ್ನು ಸರ್ಕಾರಿ ಆಸ್ಪತ್ರೆಯ ( ಕೆ.ಸಿ.ಜನರಲ್ ಆಸ್ಪತ್ರೆ ಅಥವಾ ವಿಕ್ಟೋರಿಯಾ ಆಸ್ಪತ್ರೆ ) ಆವರಣದಲ್ಲಿ ನಿಲ್ಲಿಸಲಾಗುವುದು ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಈ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಅಗತ್ಯ ಆಮ್ಲಜನಕ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ . 

 

ಸದ್ಯಕ್ಕೆ ಪ್ರಾಯೋಗಿಕವಾಗಿ ಒಂದು ಬಿ.ಎಂ.ಟಿ.ಸಿ. ಬಸ್ ಅನ್ನು ಇದಕ್ಕಾಗಿ ಒದಗಿಸಲಾಗಿದೆ ಎಂದು ಸವದಿ ತಿಳಿಸಿದ್ದಾರೆ . ಫೌಂಡೇಶನ್ ಇಂಡಿಯಾ ಎಂಬ ಸ್ವಯಂಸೇವಾ ಸಂಸ್ಥೆಯವರು ಈ ಬಸ್ಸಿನಲ್ಲಿ ಆಮ್ಲಜನಕ ಸರಬರಾಜು ಮಾಡಿ ಸೇವೆ ನೀಡಲು ಎಲ್ಲಾ ಅಗತ್ಯ ಉಪಕರಣಗಳನ್ನು ಅಳವಡಿಸುತ್ತಿದ್ದಾರೆ . ಏಕಕಾಲಕ್ಕೆ ಒಟ್ಟು ಆರು ರೋಗಿಗಳಿಗೆ ಈ ಬಸ್ಸಿನಲ್ಲಿ ಆಮ್ಲಜನಕ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ .

 

ಅಷ್ಟೇ ಅಲ್ಲದೇ, ಚಾಲಕರು ಮತ್ತು ಸಿಬ್ಬಂದಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸದೊಂದಿಗೆ ‘ ಆಕ್ಸಿಜನ್ ಆನ್ ವೀಲ್ಸ್ ‘ ಬಸ್ಸನ್ನು ಸಜ್ಜುಗೊಳಿಸಲಾಗಿದೆಯಲ್ಲದೇ , ಸ್ಯಾನಿಟೈಸರ್ , ಮಾಸ್ಟ್ ಗಳನ್ನು ಇದರಲ್ಲಿ ಒದಗಿಸಲಾಗುವುದು ಎಂದು ತಿಳಿದು ಬಂದಿದೆ. 

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು