News Karnataka Kannada
Saturday, April 13 2024
Cricket
ಬೆಂಗಳೂರು ನಗರ

ಕೋವಿಡ್‌ ಕೆಲಸಕ್ಕೆ 8500 ಗೃಹರಕ್ಷಕ ಸಿಬ್ಬಂದಿ ನಿಯೋಜನೆ: ಸಚಿವ ಬೊಮ್ಮಾಯಿ

Photo Credit :

ಕೋವಿಡ್‌ ಕೆಲಸಕ್ಕೆ 8500 ಗೃಹರಕ್ಷಕ ಸಿಬ್ಬಂದಿ ನಿಯೋಜನೆ: ಸಚಿವ ಬೊಮ್ಮಾಯಿ

ಬೆಂಗಳೂರು : ಕೋವಿಡ್‌ ನಿಯಂತ್ರಣ ಕಾರ್ಯದಲ್ಲಿ ಪೊಲೀಸ್‌ ಇಲಾಖೆಯು ಅವಿರತವಾಗಿ ಶ್ರಮಿಸುತ್ತಿದ್ದು, ಕೋವಿಡ್‌ ಕೆಲಸಕ್ಕಾಗಿ 8500 ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಿವಿಧ ಜಿಲ್ಲಾಡಳಿತಗಳ ವಿಡಿಯೋ ಸಂವಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್‌ ಕೆಲಸಕ್ಕಾಗಿ ಗೃಹ ರಕ್ಷಕ ದಳ ಸಿಬ್ಬಂದಿಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಮತ್ತಷ್ಟು ಅಗತ್ಯ ಇರುವ ಕಾರಣ 8500 ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ. ಅಗತ್ಯ ಬಿದ್ದರೆ ಮತ್ತಷ್ಟು ಸಿಬ್ಬಂದಿಯನ್ನು ಒದಗಿಸಲಾಗುವುದು ಎಂದರು.ಕೋವಿಡ್‌ ತಡೆಯಲು ರಾಜ್ಯದಲ್ಲಿ ಜಾರಿಗೊಳಿಸಿರುವ ಕರ್ಫ್ಯೂ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದಾರೆ. ಕರ್ಫ್ಯೂ ನಿರ್ಬಂಧಗಳನ್ನು ಅನುಷ್ಠಾನ ಮೇಲುಸ್ತುವಾರಿಗೆ ಐವರು ಎಡಿಜಿಪಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ರಾಜ್ಯದ ಎಲ್ಲಾ ಕಾರಾಗೃಹಗಳನ್ನು ಸ್ಯಾನಿಟೈಸ್‌ ಮಾಡುವಂತೆ ಸೂಚಿಸಲಾಗಿದೆ. ಜೈಲುಗಳಲ್ಲಿನ ಪಾಸಿಟಿವ್‌ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸೋಂಕಿತ ಕೈದಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ರಾಜ್ಯದ ಎಲ್ಲಾ ಕಾರಾಗೃಹದಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ 1500 ಮಂದಿ ಸಿವಿಲ್‌ ಡಿಫೆನ್ಸ್‌ ತರಬೇತಿ ಹೊಂದಿರುವವರು ಇದ್ದಾರೆ. ಅವರನ್ನು ಪ್ರತಿ ವಾರ್ಡ್‌ನಲ್ಲಿ ಕೋವಿಡ್‌ ಸೋಂಕಿತರನ್ನು ಪತ್ತೆ ಹಚ್ಚಲು ಮತ್ತು ಐಸೋಲೇಷನ್‌ ಕೆಲಸಕ್ಕೆ ಬಳಕೆ ಮಾಡಲು ನಿರ್ಧರಿಸಲಾಗಿದೆ. ಅಲ್ಲದೇ, ಬೆಂಗಳೂರು ನಗರದಲ್ಲಿ ಶುಚಿತ್ವ ಕಾಪಾಡಲು ಕಳೆದ ಬಾರಿಯಂತೆ ಕೆಲಸ ಮಾಡಲು ಅಗ್ನಿಶಾಮಕ ದಳ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಸಚಿವರು ಹೇಳಿದರು.ಮೇಡ್‌ ಇನ್‌ ಬಾಂಗ್ಲಾದೇಶ ಎಂದು ಹೆಸರಿರುವ ರೆಮ್‌ಡೆಸಿವಿರ್‌ ಮಾರಾಟ ಪ್ರಕರಣವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಕೆಲವರನ್ನು ಬಂಧಿಸಲಾಗಿದೆ. ಈ ಔಷಧ ಬೆಂಗಳೂರಿಗೆ ಹೇಗೆ ಬಂತು? ಯಾವ ಆಸ್ಪತ್ರೆಯಿಂದ ಬಂತು? ಇದನ್ನು ಇಲ್ಲಿಗೆ ತಂದ ವ್ಯಕ್ತಿ ಯಾರು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು