News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಡಿಕೆ ಶಿವಕುಮಾರ್ ಗೆ ವಾರಂಟ್ ಜಾರಿ

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
Photo Credit :

ಬೆಂಗಳೂರು : ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಕೋರ್ಟ್ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ವಾರಂಟ್ ಜಾರಿ ಮಾಡಿದೆ.

ಕೊರೊನಾ ನಿಯಮ ಉಲ್ಲಂಘನೆ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ನ್ಯಾಯಾಲಯದಿಂದ ನೋಟಿಸ್ ಬಂದಿದೆ. ಕೊರೊನಾ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ನಗರದ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕೊರೊನಾ ನಿಯಮ ಉಲ್ಲಂಘಿಸಿ ರೈತರ ಪ್ರತಿಭಟನೆ, ಪೆಟ್ರೋಲ್, ಡಿಸೇಲ್ ದರ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ನನಗೆ ವಾರೆಂಟ್ ಜಾರಿ ಮಾಡಿದೆ. ಹೀಗಾಗಿ ಕೋರ್ಟ್ ಗೆ ಹೋಗುತ್ತಿದ್ದೇನೆ. ಆಮೇಲೆ ಮಾತನಾಡ್ತೀನಿ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಸೇರಿ ಕೆಲವು ಕಾಂಗ್ರೆಸ್ ಮುಖಂಡರು ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು