News Karnataka Kannada
Saturday, April 13 2024
Cricket
ಬೆಂಗಳೂರು ನಗರ

ಚಂಡಮಾರುತ, ರಾಜ್ಯದಲ್ಲಿ ಅತ್ಯಧಿಕ ಮಳೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

Photo Credit :

ಚಂಡಮಾರುತ, ರಾಜ್ಯದಲ್ಲಿ ಅತ್ಯಧಿಕ ಮಳೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು, : ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹಾಗೆಯೇ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಮೇ 16 ರಂದು ರಾಜ್ಯದ 7 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮೇ 15ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಅಧಿಕ ಮಳೆಯಾಗುವ ಸಾಧ್ಯತೆ ಇದೆ, 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಎಚ್‌ಎಎಲ್‌ನಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು ಎಚ್‌ಎಎಲ್‌, ಹಿರಿಯೂರು, ಮೂಡಬಿದಿರೆ, ಶ್ರವಣಬೆಳಗೊಳ, ಮಾಣಿ, ಮಾಗಡಿ, ರಾಯಚೂರು, ಮಂಗಳೂರು, ಕೋಟ,ಚಿಂತಾಮಣಿ, ತಿಪಟೂರು, ಬೆಂಗಳೂರು, ಕೊಳ್ಳೇಗಾಲ, ಸುಬ್ರಹ್ಮಣ್ಯ, ಧರ್ಮಸ್ಥಳ, ಥೊಂಡೆಭಾವಿ, ಪಂಚನಹಳ್ಳಿ, ಶ್ರೀರಾಂಪುರ, ಮಾದಾಪುರ, ಹೊಸಕೋಟೆ, ಗೌರಿಬಿದನೂರು, ಹೆಸರಘಟ್ಟ, ಪುತ್ತೂರು, ಪಣಂಬೂರಿನಲ್ಲಿ ಮಳೆಯಾಗಿದೆ.ಮೇ 16 ರಂದು ರಾಜ್ಯದ 7 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ದಾವಣಗೆರೆ, ಹಾಸನ, ಕೊಡಗು, ಮೈಸೂರು, ತುಮಕೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಕಲಬುರಗಿ, ಬೀದರ್, ಬಾಗಲಕೋಟೆ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು