News Karnataka Kannada
Wednesday, April 17 2024
Cricket
ಬೆಂಗಳೂರು ನಗರ

ಚಂದ್ರು ಕೊಲೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ

Hampi: There is no proposal before the government to hand over chandrasekhar's death case to CID
Photo Credit :

ಬೆಂಗಳೂರು : ಜಗಜೀವನ್‌ ರಾಂ ನಗರದಲ್ಲಿ ಇತ್ತೀಚೆಗೆ ನಡೆದ ಚಂದ್ರಶೇಖರ್‌ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಭಾನುವಾರ ಹೇಳಿಕೆ ನೀಡಿರುವ ಅವರು, ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯಬೇಕು.

ಈ ಕುರಿತು ಭಾನುವಾರ ಹೇಳಿಕೆ ನೀಡಿರುವ ಅವರು, ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯಬೇಕು. ಸತ್ಯವನ್ನು ಬಯಲಿಗೆಳೆದು, ಹಂತತಕರನ್ನು ಶಿಕ್ಷೆಗೆ ಒಳಪಡಿಸಬೇಕು ಎಂಬ ಉದ್ದೇಶದಿಂದ ಸಿಐಡಿ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚಂದ್ರಶೇಖರ್‌ ಕೊಲೆ ಪ್ರಕರಣದಲ್ಲಿ ಸತ್ಯ ಹೊರಗೆ ತರಬೇಕಿದೆ. ಈ ಕಾರಣದಿಂದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಮತ್ತು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಅವರಿಗೆ ನಿರ್ದೇಶನ ನೀಡಲಾಗಿದೆ. ಶೀಘ್ರದಲ್ಲೇ ಆದೇಶ ಹೊರಬೀಳಲಿದೆ ಎಂದಿದ್ದರು.

ಈ ಪ್ರಕರಣದ ತನಿಖೆ ಕುರಿತು ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿರುವ ಕುರಿತು ಕೇಳಿದಾಗ, ‘ಯಾರು ವಾಗ್ದಾಳಿ ನಡೆಸುತ್ತಾರೆ, ಟೀಕಿಸುತ್ತಾರೆ ಎಂಬುದು ಮುಖ್ಯ ಅಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ, ಸತ್ಯ ಹೊರ ತರುವುದು ನಮಗೆ ಮುಖ್ಯ’ ಎಂದು ಮುಖ್ಯಮಂತ್ರಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು