News Karnataka Kannada
Friday, April 12 2024
Cricket
ಬೆಂಗಳೂರು ನಗರ

ಚಾಮರಾಜನಗರ-ಮೈಸೂರು ಡಿಸಿ ಕಚೇರಿಗಳ ದಾಖಲೆ ಜಪ್ತಿಗೆ​ ಹೈಕೋರ್ಟ್ ಆದೇಶ

Photo Credit :

ಚಾಮರಾಜನಗರ-ಮೈಸೂರು ಡಿಸಿ ಕಚೇರಿಗಳ ದಾಖಲೆ ಜಪ್ತಿಗೆ​ ಹೈಕೋರ್ಟ್ ಆದೇಶ

.                                                                                                                                                                                      

ಬೆಂಗಳೂರು: ಆಕ್ಸಿಜನ್ ಸಿಗದೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವಿಗೀಡಾದ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆ ಒಪ್ಪಿಸುವುದಾಗಿ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲಾಧಿಕಾರಿ ಕಚೇರಿಗಳ ದಾಖಲೆಗಳನ್ನು ಜಪ್ತಿ​ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.

ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಚಾಮರಾಜನಗರದಲ್ಲಿ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ವಿಚಾರವಾಗಿ ನಿನ್ನೆ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತ್ತು. ಈ ಸಂಬಂಧ ರಾಜ್ಯ ಸರ್ಕಾರದ ನಿಲುವು ಕೇಳಿತ್ತು.

ಈ ಬಗ್ಗೆ ಇಂದು ಹೈಕೋರ್ಟ್​ಗೆ ಮಾಹಿತಿ ನೀಡಿದ ಅಡ್ವೊಕೇಟ್ ಜನರಲ್, ಪ್ರಕರಣದ ತನಿಖೆಗೆ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರ ಏಕಸದಸ್ಯ ಆಯೋಗ ರಚಿಸಲಾಗಿದೆ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ನಾವು ನ್ಯಾಯಾಂಗ ತನಿಖೆ ನಡೆಸುವ ಕುರಿತು ಸರ್ಕಾರದ ನಿಲುವನ್ನು ಮಾತ್ರವೇ ಕೇಳಿದ್ದೆವು, ಆದೇಶ ಹೊರಡಿಸಲು ಹೇಳಿರಲಿಲ್ಲ. ನಿವೃತ್ತ ನ್ಯಾಯಮೂರ್ತಿ ನೇಮಕವನ್ನು ಹೈಕೋರ್ಟ್​ಗೆ ಬಿಡಬೇಕು ಎಂದಿತು. ಅಲ್ಲದೆ, ಒಂದು ವೇಳೆ ಸರ್ಕಾರ ಆದೇಶ ಹೊರಡಿಸಿದ್ದರೆ ಕೂಡಲೇ ದಾಖಲೆಗಳನ್ನು ಜಪ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.

 

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗಳಲ್ಲಿರುವ ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಜಪ್ತಿ ಮಾಡಬೇಕು ಎಂದು ಕೋರ್ಟ್ ಆದೇಶಿಸಿದೆ. ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಈ ದಾಖಲೆಗಳನ್ನು ಪರಿಶೀಲಿಸಬಹುದು ಎಂದು ಸ್ಪಷ್ಟಪಡಿಸಿದೆ.

ನ್ಯಾಯಾಂಗ ತನಿಖೆಗೆ ಸರ್ಕಾರವೇ ನಿವೃತ್ತ ನ್ಯಾಯಮೂರ್ತಿ ನೇಮಕ ಮಾಡಿ ಆದೇಶ ಹೊರಡಿಸಿರುವ ಕುರಿತು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದ ಹಿನ್ನೆಲೆ, ಸ್ಪಷ್ಟನೆ ನೀಡಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ನ್ಯಾಯಾಂಗ ತನಿಖೆ ಆದೇಶದಲ್ಲಿ ಹೈಕೋರ್ಟ್ ಸೂಚನೆ ಪಾಲಿಸಲಾಗುವುದು. ಆದೇಶವನ್ನು ಪರಿಷ್ಕರಿಸಲಾಗುವುದು ಎಂದು ವಿವರಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು