News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆ ಸಾಧ್ಯತೆ

Photo Credit :

ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆ ಸಾಧ್ಯತೆ

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗ್ರಹದಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಮುಂದಿನ ವರ್ಷ ಜನವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಇವರ ಬಿಡುಗಡೆ ಕುರಿತು ಬೆಂಗಳೂರು ಮೂಲದ ಸಾಮಾಜಿಕ ಕಾರ್ಯಕರ್ತ ಟಿ ನರಸಿಂಹಮೂರ್ತಿ ಎನ್ನುವವರು ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಶಶಿಕಲಾ ನಟರಾಜನ್ ಜನವರಿ 27, 2021ರಲ್ಲಿ ಬಿಡುಗಡೆಗೊಳ್ಳಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪಾವತಿಸಬೇಕಾದ ದಂಡ ಪಾವತಿಗೆ ವಿಳಂಬ ಮಾಡಿದರೆ ಅವರ ಬಿಡುಗಡೆ ಅವಧಿ ಮುಂದೂಡಲಾಗುತ್ತದೆ. ಪೆರೋಲ್ ರಜಾಗಳನ್ನು ಲೆಕ್ಕ ಹಾಕಿದರೆ ಬಿಡುಗಡೆ ದಿನಾಂಕದಲ್ಲಿ ಆಚೀಚೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ 2017ರಲ್ಲಿ ಶಶಿಕಲಾ ಅವರಿಗೆ ನಾಲ್ಕು ವರ್ಷದ ಜೈಲುಶಿಕ್ಷೆ ಮತ್ತು 10 ಕೋಟಿ ರೂಪಾಯಿ ದಂಡ ವಿಧಿಸಿತ್ತು.  ಒಂದು ವೇಳೆ ಆಕೆ ತನ್ನ ಮೇಲೆ ವಿಧಿಸಿರುವ ದಂಡದ ಮೊತ್ತ ಪಾವತಿಸಿದ್ದಾದರೆ 2021 ಜನವರಿ 27ಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು