News Karnataka Kannada
Thursday, April 25 2024
Cricket
ಬೆಂಗಳೂರು ನಗರ

ಜಾಲಹಳ್ಳಿಯಲ್ಲಿ ಇಂದು 100 ಹಾಸಿಗೆಯ ಆಸ್ಪತ್ರೆ ಉದ್ಘಾಟನೆ

Photo Credit :

ಜಾಲಹಳ್ಳಿಯಲ್ಲಿ ಇಂದು 100 ಹಾಸಿಗೆಯ ಆಸ್ಪತ್ರೆ ಉದ್ಘಾಟನೆ

ಬೆಂಗಳೂರು, ; ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಂಕಿತರು ಬೆಡ್‌ಗಳನ್ನು ಪಡೆಯಲು ಹರಸಾಹಸ ಪಡಬೇಕಿದೆ. ಜಾಲಹಳ್ಳಿಯಲ್ಲಿ ಇಂದು 100 ಹಾಸಿಗೆಯ ಆಸ್ಪತ್ರೆ ಉದ್ಘಾಟನೆಯಾಗುತ್ತಿದೆ.ಜಾಲಹಳ್ಳಿಯ ಏರ್ ಫೋರ್ಸ್ ಸ್ಟೇಷನ್‌ನಲ್ಲಿ 100 ಹಾಸಿಗೆಗಳ ಕೋವಿಡ್ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಸಾಮಾನ್ಯ ಜನರನ್ನು ಸಹ ಈ ಸೇನಾ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗುತ್ತದೆ. ಏರ್ ಫೋರ್ಸ್‌ನ ಕಮಾಂಡ್ ಆಸ್ಪತ್ರೆ ಸಿಬ್ಬಂದಿ ಇದರ ನಿರ್ವಹಣೆ ನೋಡಿಕೊಳ್ಳಲಿದ್ದಾರೆ.
ಬಿಬಿಎಂಪಿ ಮತ್ತು ರಾಜ್ಯ ಸರ್ಕಾರ ಸೂಚಿಸುವ ಜನರು ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಆಕ್ಸಿಜನ್ ವ್ಯವಸ್ಥೆ ಹೊಂದಿರುವ ಬೆಡ್‌ಗಳು ಸಹ ಈ ಆಸ್ಪತ್ರೆಯಲ್ಲಿವೆ. ನಗರದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನಲೆಯಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ.ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಏಪ್ರಿಲ್ 27ರಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಮೇ 12ರ ಬೆಳಗ್ಗೆ 6 ಗಂಟೆಯ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ. ಲಾಕ್ ಡೌನ್ ಇದ್ದರೂ ರಾಜ್ಯದಲ್ಲಿ ಬುಧವಾರ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 50 ಸಾವಿರದ ಗಡಿಯನ್ನು ದಾಟಿದೆ.
ಬುಧವಾರ ಕರ್ನಾಟಕದಲ್ಲಿ 50,112 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ 50 ಸಾವಿರ ದಾಟಿದೆ. ಇವುಗಳಲ್ಲಿ ಬೆಂಗಳೂರು ನಗರದಲ್ಲಿಯೇ 23,106 ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,13,314.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು