News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಜೆಡಿಎಸ್ ತೊರೆದು ಬಿಜೆಪಿ ಸೇರಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Belagavi: Voter data leak case discussed in Council
Photo Credit :

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಜೆಡಿಎಸ್ ತೊರೆದು ಬಿಜೆಪಿ ಸೇರಿದರು. ನಗರದ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊರಟ್ಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಜಗದೀಶ ಶೆಟ್ಟರ್, ಹಲವು ಸಚಿವರು, ಶಾಸಕರು ಉಪಸ್ಥಿತರಿದ್ದರು.

ಜನತಾ ಪರಿವಾರದಲ್ಲಿ ರಾಜಕೀಯ ಜೀವನ ಆರಂಭಿಸಿದ್ದ ಹೊರಟ್ಟಿ, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ಏಳು ಬಾರಿ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಾರೆ. ಮುಂದಿನ ಚುನಾವಣೆಯನ್ನು ಬಿಜೆಪಿಯಿಂದ ಎದುರಿಸಲು ನಿರ್ಧರಿಸಿದ್ದಾರೆ.

ಜೆಡಿಎಸ್ ತೊರೆದು ಬಿಜೆಪಿ ಸೇರುವುದಾಗಿ ಹೊರಟ್ಟಿ ಇತ್ತೀಚೆಗೆ ಹೇಳಿಕೆ ನೀಡಿದ್ದರು. ವಿಧಾನ ಪರಿಷತ್‌ನ ಇತರ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ.

ಬಿಜೆಪಿ ಸೇರಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬಸವರಾಜ ಹೊರಟ್ಟಿ, ‘ಜೆಡಿಎಸ್ ಪಕ್ಷದ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತದಾರರ ಅಭಿಪ್ರಾಯದಂತೆ ಬಿಜೆಪಿ ಸೇರಿದ್ದೇನೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು