News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ಡಿಸೆಂಬರ್ ತಿಂಗಳಿನಿಂದ ಶಾಲಾ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ ವಿತರಿಸಲು ಮುಂದಾದ ರಾಜ್ಯ ಸರ್ಕಾರ

School
Photo Credit :

ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.ಹೌದು, ಮಕ್ಕಳಲ್ಲಿನ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಸರ್ಕಾರದ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ , ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಏಳು ಜಿಲ್ಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದಲೂ ಬಳಲುತ್ತಿರುವ ಬಗ್ಗೆ ತಿಳಿದುಬಂದಿದೆ ಈ ಹಿನ್ನೆಲೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 70.7, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 70.6, ಬೀದರ್ ಜಿಲ್ಲೆಯಲ್ಲಿ ಶೇಕಡಾ 69.1, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 74, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 72.3, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 68 ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ , ಈ ಹಿನ್ನೆಲೆ ಮಕ್ಕಳಿಗೆ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು