News Karnataka Kannada
Saturday, April 13 2024
Cricket
ಬೆಂಗಳೂರು ನಗರ

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಎನ್ ಐಎಯಿಂದ ತನಿಖೆ ಪ್ರಾರಂಭ

Photo Credit :

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಎನ್ ಐಎಯಿಂದ ತನಿಖೆ ಪ್ರಾರಂಭ

ಬೆಂಗಳೂರು: ನಗರದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ಹಿಂಸಾಚಾರ ಪ್ರಕರಣದ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಒಪ್ಪಿಸಲಾಗಿತ್ತು. ಆಗಸ್ಟ್‌ನಲ್ಲಿ ನಡೆದ ಈ ಕೃತ್ಯದ ತನಿಕೆಯನ್ನು ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ಮಂಗಳವಾರ ಕೈಗೆತ್ತಿಕೊಂಡಿದೆ.

ಗುಂಪೊಂದು ಆಗಸ್ಟ್ 11 ರ ರಾತ್ರಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮುಂದೆ ಪ್ರತಿಭಟನೆ ನಡೆಸಿ, ಮನೆಗೆ ಬೆಂಕಿ ಹಚ್ಚಿತ್ತು. ಇದೇ ಗುಂಪು ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಮಾಡಿತ್ತು ಮತ್ತು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿತ್ತು.

ಎಸ್‌ಡಿಪಿಐನ ರಾಜ್ಯ ಘಟಕದ ರ್ಯದರ್ಶಿ ಮುಜಾಮಿಲ್ ಪಾಷಾ ಸಭೆ ನಡೆಸಿದ್ದು, ನಂತರ ಅವರು ಗುಂಪೊಂದನ್ನು ಪ್ರಚೋದಿಸಿ, ಹಿಂಸಾಚಾರ ನಡೆಸುವಂತೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರಿಗೆ ನಿರ್ದೇಶನ ನೀಡಿದ್ದರು ಎಂಬ ಆರೋಪ ಮಾಡಲಾಗಿದೆ.

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳಲ್ಲಿ ವಿಧ್ವಂಸಕ ಕೃತ್ಯ ಎಸಗಿ , ಆಸ್ತಿ ಹಾನಿಗೊಳಿಸಿದ್ದ ಪ್ರತಿಭಟನಕಾರರು , ಶಾಸಕರ ಮನೆ ಮೇಲೂ ದಾಳಿ ನಡೆಸಿದ್ದರು.

ಈ ಎಲ್ಲದರ ಆದಾರದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ ( ಯುಎಪಿಎ ) , ಬೆಂಕಿ ಹಚ್ಚುವುದು , ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿ ಹಾನಿಗೆ ಸಂಬಂಧಿಸಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. ‘ ಐಜಿ ಬ್ಯಾಂಕಿನ ಅಧಿಕಾರಿ ನೇತೃತ್ವದ ತಂಡವೊಂದನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ‘ ಎಂದು ಎನ್‌ಐಎ ವಕ್ತಾರರೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು