News Karnataka Kannada
Monday, April 22 2024
Cricket
ಬೆಂಗಳೂರು ನಗರ

ನಟಿ ಸಂಜನಾ ಸಿಸಿಬಿ ಪೊಲೀಸರ ವಶಕ್ಕೆ

Photo Credit :

ನಟಿ ಸಂಜನಾ ಸಿಸಿಬಿ ಪೊಲೀಸರ ವಶಕ್ಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಮಾಫಿಯಾ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದು, ಇದೀಗ ಸಂಜನಾ ಅವರನ್ನು ಸಿಸಿಬಿ ಅಧಿಕಾರಿಗಳು ಇಂದಿರಾನಗರದ ಫ್ಲ್ಯಾಟ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.‌

ಸಂಜನಾ ಅವರಿಂದ ಅವರ ಮೊಬೈಲನ್ನೂ ಸಹ ವಶಕ್ಕೆ ಪಡೆದಿದ್ದು, ಇಂದಿರಾನಗರದ ಫ್ಲ್ಯಾಟ್‌ನಲ್ಲೇ ಸಿಸಿಬಿಯಿಂದ ವಿಚಾರಣೆ ನಡೆಸಿದೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾಳನ್ನು ಸಿಸಿಬಿ ಕಚೇರಿಗೆ ಕರೆಯೊಯ್ದಿದೆ.

ಇಂದು ಬೆಳಿಗ್ಗೆಯಷ್ಟೇ ಇಂದಿರಾನಗರದಲ್ಲಿರುವ ಸಂಜನಾ ಅವರ ಮನೆ ಮೇಲೆ ಸಿಸಿಬಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸಿದ್ದಾರೆ.

ಸಿಸಿಬಿ ದಾಳಿ ವೇಳೆ ನಟಿ ಸಂಜನಾ ಮನೆಯಲ್ಲಿ ಮಲಗಿದ್ದು, ನಿದ್ರೆಯಿಂದ ಎದ್ದಿರಲಿಲ್ಲ. ಸಿಸಿಬಿ ಪೊಲೀಸರು ಮನೆಯ ಬಳಿ ಬಂದ ಸಂದರ್ಭದಲ್ಲಿ ಸಂಜನಾ ತಾಯಿ ಬಾಗಿಲು ತೆಗೆದಿದ್ದಾರೆ. ನಂತರ ನೋಟಿಸ್ ತೋರಿಸಿದ ಅಧಿಕಾರಿಗಳು ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಮಲಗಿದ್ದ ಸಂಜನಾ ಅವರಿಗೆ ವಿಚಾರವನ್ನು ತಿಳಿಸಿ, ತನಿಖೆಗೆ ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಶೋಧ ಕಾರ್ಯ ಪೂರ್ಣಗೊಂಡ ಬಳಿಕ ಸಂಜನಾ ಅವರನ್ನು ವಶಕ್ಕೆ ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು