News Karnataka Kannada
Friday, April 19 2024
Cricket
ಬೆಂಗಳೂರು ನಗರ

ನಮ್ಮ ಕೆಲಸ ಏನಿದೆಯೋ ಅದನ್ನು ನಾವು ಮಾಡುತ್ತಿದ್ದೇವೆ; ಪೊಲೀಸ್ ಆಯುಕ್ತ ಕಮಲ್ ಪಂತ್

Kamal Panth
Photo Credit :

ಬೆಂಗಳೂರು, ಏ.11 :  ನಮ್ಮ ಕೆಲಸ ಏನಿದೆಯೋ ಅದನ್ನು ನಾವು ಮಾಡುತ್ತಿದ್ದೇವೆ. ಸರ್ಕಾರದ ಆದೇಶದ ಜತೆಗೆ ನಾವು ಕಾನೂನು ಪಾಲಿಸುತ್ತಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ಮೈಸೂರು ರಸ್ತೆಯಲ್ಲಿನ ಸಿಎಆರ್ ಕೇಂದ್ರದಲ್ಲಿ ಏರ್ಪಡಿಸಿದ್ದ ಸೇವಾ ಕವಾಯತು ವಂದನೆ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜೆಜೆ ನಗರದಲ್ಲಿ ನಡೆದ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಸರ್ಕಾರದ ಆದೇಶದಂತೆ ಈ ಪ್ರಕರಣವನ್ನು ಹಸ್ತಾಂತರಿಸಲಾಗಿದ್ದು, ಸಿಐಡಿ ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದರು.

ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಇ-ಮೇಲ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನುರಿತ ತಜ್ಞರಿಂದ, ಸೈಬರ್ ಕ್ರೈಂ ಮತ್ತು ಸ್ಪೆಷಲ್ ಟೀಮ್ ಜತೆಗೆ ಬೇರೆ ಬೇರೆ ಇಲಾಖೆಗಳಿಂದ ತನಿಖೆ ನಡೆಯುತ್ತಿದೆ ಎಂದು ಹೇಳಿದರು. ವಿದೇಶದಿಂದಲೂ ಈ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ. ಆದಷ್ಟು ಬೇಗ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗುವುದು ಎಂದು ಆಯುಕ್ತರು ವಿಶ್ವಾಸ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು