News Karnataka Kannada
Saturday, April 20 2024
Cricket
ಬೆಂಗಳೂರು ನಗರ

ನಾಳೆ ಸಾರಿಗೆ ಬಸ್‌ ಎಂದಿನಂತೆ ಸಂಚಾರ: ಡಿಸಿಎಂ ಲಕ್ಷ್ಮಣ ಸವದಿ

Photo Credit :

ನಾಳೆ ಸಾರಿಗೆ ಬಸ್‌ ಎಂದಿನಂತೆ ಸಂಚಾರ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಕೆಲವು ಸಂಘಟನೆಗಳು ಸೋಮವಾರ ಬಂದ್ ಗೆ ಕರೆ ಕೊಟ್ಟಿರುವುದರಿಂದ ರಾಜ್ಯದಾದ್ಯಂತ ಸಾರಿಗೆ ಸಂಚಾರ ಸುಗಮ ವ್ಯವಸ್ಥೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಂದ್ ಹಿನ್ನೆಲೆಯಲ್ಲಿ ಬಸ್ಸುಗಳಿಗೆ ಮತ್ತು ಇತರ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಹೆಚ್ಚಿನ ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಿಕೊಡಬೇಕೆಂದು ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಚನೆ ಕೊಡಲಾಗಿದೆ.

ಅಷ್ಟೇ ಅಲ್ಲ ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟು ಮಾಡಲು ಯಾರೇ ಯತ್ನಿಸಿದರೂ ಕೂಡ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲವೆಂದು ಡಿಸಿಎಂ ಎಚ್ಚರಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು