News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ನೂತನ ಶಿಕ್ಷಣ ನೀತಿಯಿಂದ ಭಾರತವು ಜ್ಞಾನದ ಸೂಪರ್ ಪವರ್: ಡಿಸಿಎಂ

Photo Credit :

ನೂತನ ಶಿಕ್ಷಣ ನೀತಿಯಿಂದ ಭಾರತವು ಜ್ಞಾನದ ಸೂಪರ್ ಪವರ್: ಡಿಸಿಎಂ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಭಾರತವು ಜಗತ್ತಿನಲ್ಲಿಯೇ ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಎಂದು ವಿಶ್ವಾಸವನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಇಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕ್ರಿಸ್ತು ಜಯಂತಿ ಕಾಲೇಜ್ ಹಾಗೂ ಬೆಂಗಳೂರು ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರ ಹಮ್ಮಿಕೊಂಡಿದ್ದ ಶಿಕ್ಷಣ ನೀತಿ ಜಾರಿಯ ಕುರಿತು ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಶಿಕ್ಷಣ ವ್ಯವಸ್ಥೆ ಯಾವ ರೀತಿ ಇರಬೇಕು? ಯಾವ ದಿಕ್ಕಿನಲ್ಲಿ ಸಾಗಬೇಕು? ಎಂಬ ಪ್ರಶ್ನೆಗೆ ಸ್ಪಷ್ಟ ಮಾರ್ಗಸೂಚಿ ನೀಡಿರುವ ಶಿಕ್ಷಣ ನೀತಿ, ಇನ್ನು ಕೆಲವೇ ವರ್ಷಗಳಲ್ಲಿ ಭಾರತವನ್ನು ಸಂಪೂರ್ಣವಾಗಿ ಬದಲಾಯಿಸಲಿದೆ ಎಂಬ ನಂಬಿಕೆ ನನಗಿದೆ ಎಂದರು.

ಶಿಕ್ಷಣ ನೀತಿಯಲ್ಲಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಬಹು ವಿಷಯಗಳ ಕಲಿಕೆ, ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ರೂಪಿಸುವುದು, ಉನ್ನತ ಮಟ್ಟದ ಬೊಧನೆ, ಗುಣಮಟ್ಟದ ಕಲಿಕೆ ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಅತ್ಯಂತ ಮಹತ್ವದ ಅಂಶಗಳು. ಹೊಸ ನೀತಿ ಎಲ್ಲ ರೀತಿಯ ಉತ್ತೇಜನ ನೀಡಿ ಬಹುಮುಖ ಪ್ರತಿಭೆಗಳು ಹೊರ ಬರಲು ಸಾಧ್ಯ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ಹೊಸ ಶಿಕ್ಷಣ ನೀತಿಯ ಜಾರಿಯತ್ತ ರಾಜ್ಯ ಸರ್ಕಾರ ಸಿದ್ಧತೆಯನ್ನು ಮಾಡಿಕೊಳ್ಳುವತ್ತ ಮಗ್ನವಾಗಿದೆ. ಈ ನೀತಿ ಪರಿಣಾಮಕಾರಿಯಾಗಿ ಜಾರಿಯಾಗಬೇಕಾದರೆ ವಿಶ್ವವಿದ್ಯಾಲಯ ಮತ್ತು ಸಮಾಜದ ಪ್ರತಿಯೊಬ್ಬರ ಪಾತ್ರ ಬಹುಮುಖ್ಯವಾಗಿದೆ ಎಂದು ಉಪಮುಖ್ಯಮಂತ್ರಿ ಹೇಳಿದರು.

ಶಿಕ್ಷಣ ನೀತಿ ಸಮಿತಿಯ ಸದಸ್ಯ ಪ್ರೊ. ಎಂ. ಕೆ. ಶ್ರೀಧರ್, ಬೆಂಗಳೂರು ಉತ್ತರ ವಿವಿ ಉಪಕುಲಪತಿ ಪ್ರೊ. ಟಿ.ಡಿ ಕೆಂಪರಾಜು, ಕ್ರಿಸ್ತು ಜಯಂತಿ ಕಾಲೇಜಿನ ಪ್ರಾಂಶುಪಾಲ ಡಾ. ಅಗಸ್ಟೀನ್ ಜಾರ್ಜ್ ಮುಂತಾದವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು