News Karnataka Kannada
Monday, April 22 2024
Cricket
ಬೆಂಗಳೂರು ನಗರ

ಬಸ್‌ ಪ್ರಯಾಣ ದರ ಹೆಚ್ಚಳ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ

Vajra Bus
Photo Credit :

ಬೆಂಗಳೂರು: ಬಸ್‌ ಪ್ರಯಾಣ ದರ ಹೆಚ್ಚಳದ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ ಸದ್ಯ ರಾಜ್ಯ ಸರಕಾರ ಸಂಸ್ಥೆಗೆ ಆಗುತ್ತಿರುವ ಹೊರೆಯನ್ನು ಭರಿಸುತ್ತಿದೆ ’ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್‌ ಸ್ಪಷ್ಟಪಡಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಳು ವರ್ಷಗಳ ಹಿಂದೆ ಬಿಎಂಟಿಸಿ ಬಸ್‌ ಟಿಕೆಟ್‌ ದರ ಪರಿಷ್ಕರಣೆ ಮಾಡಲಾಗಿತ್ತು.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಳು ವರ್ಷಗಳ ಹಿಂದೆ ಬಿಎಂಟಿಸಿ ಬಸ್‌ ಟಿಕೆಟ್‌ ದರ ಪರಿಷ್ಕರಣೆ ಮಾಡಲಾಗಿತ್ತು. ಅಲ್ಲಿಂದ ಇದುವರೆಗೆ ಶೇ. 50ರಷ್ಟು ಡೀಸೆಲ್‌ ಬೆಲೆ ಹೆಚ್ಚಳವಾಗಿದ್ದು, ಇದರಿಂದ ಸಂಸ್ಥೆಗೆ ಹೊರೆಯಾಗುತ್ತಿದೆ.

ಆದರೆ ಟಿಕೆಟ್‌ ದರ ಹೆಚ್ಚಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ತೀರ್ಮಾನ ಆಗಲಿದ್ದು, ಈ ನಿಟ್ಟಿನಲ್ಲಿ ಇದುವರೆಗೆ ಯಾವುದೇ ನಿರ್ಣಯ ಆಗಿಲ್ಲ ಎಂದು ಹೇಳಿದರು.

ಇ-ಪಾವತಿ ಸೌಲಭ್ಯದ ಇಟಿಎಂ
ಈ ಹಿಂದೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಬಳಕೆ ಮಾಡಲಾಗುತ್ತಿದ್ದ ಇಟಿಎಂನಲ್ಲಿ (ಎಲೆಕ್ಟ್ರಾನಿಕ್‌ ಟಿಕೆಟ್‌ ವಿತರಣ ಯಂತ್ರ) ಟಿಕೆಟ್‌ ಮಾತ್ರ ಮುದ್ರಣ ಮಾಡಿ ವಿತರಣೆ ಮಾಡಲಾಗುತ್ತಿತ್ತು. ಹೊಸದಾಗಿ ವಿತರಣೆ ಮಾಡುತ್ತಿರುವ ಯಂತ್ರಗಳಲ್ಲಿ ಟಿಕೆಟ್‌ ಮುದ್ರಣಗೊಂದಿಗೆ ಫೋನ್‌ಪೇ, ಗೂಗಲ್‌ಪೇ, ಎಟಿಎಂ ಕಾರ್ಡ್‌ ಸೇರಿದಂತೆ ಇನ್ನಿತರ ಡಿಜಿಟಲ್‌ ಮಾದರಿಯಲ್ಲಿ ಹಣ ಪಾವತಿ ಮಾಡಿ ಟಿಕೆಟ್‌ ಪಡೆಯಬಹುದಾಗಿದೆ. ಪ್ರಾಯೋಗಿಕವಾಗಿ ಇದನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಟೆಂಡರ್‌ ಆಹ್ವಾನಿಸಿ ಎಲ್ಲ ಬಸ್‌ಗಳಲ್ಲಿಯೂ ಈ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಎಂದು ವಿವರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು