News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಬೆಂಗಳೂರಿಗೂ ಕಾಲಿಟ್ಟ ಬ್ಲ್ಯಾಕ್ ಫಂಗಸ್ ಪ್ರಕರಣಗಳು

Photo Credit :

ಬೆಂಗಳೂರಿಗೂ ಕಾಲಿಟ್ಟ ಬ್ಲ್ಯಾಕ್ ಫಂಗಸ್ ಪ್ರಕರಣಗಳು

ಬೆಂಗಳೂರು : ಕೊರೋನಾ ಸೋಂಕಿನ ಪ್ರಕರಣದಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿರುವ ಕಳಂಕಕ್ಕೆ ಗುರಿಯಾಗಿರುವ ಮಹಾರಾಷ್ಟ್ರ ಇದೀಗ ಹೊಸ ಸವಾಲು ಎದುರಿಸುತ್ತಿದೆ . ರಾಜ್ಯದಲ್ಲಿ 2000 ಕ್ಕಿಂತ ಹೆಚ್ಚಿನ ಬ್ಲ್ಯಾಕ್ ಫಂಗಸ್ ಪ್ರಕರಣ ದೃಢಪಟ್ಟಿದೆ ಎಂದು ವರದಿಯಾಗಿದೆ . ಕೊರೋನಾದಿಂದ ಗುಣಮುಖರಾದವರು ಇದರ ದಾಳಿಗೆ ತುತ್ತಾಗುತ್ತಿರುವುದು ಆತಂಕ ಸೃಷ್ಟಿಸಿದೆ . 

 

ಇದೇ ವೇಳೆ ಬ್ಲ್ಯಾಕ್ ಫಂಗಸ್ ರೋಗ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನಿಧಾನವಾಗಿ ಹರಡುತ್ತಿದೆ . ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಡಾ. ಸುಧಾಕರ್, ರಾಜ್ಯದಲ್ಲಿ ಕೂಡ ಬ್ಲ್ಯಾಕ್ ಫಂಗಸ್ ರೋಗ ಪತ್ತೆಯಾಗಿದೆ ಎಂದು ಹೇಳಿದರು.

 

ಈ ಮಧ್ಯೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಹಿರಿಯ ವೈದ್ಯಾಧಿಕಾರಿಯೊಬ್ಬರು ಬೆಂಗಳೂರಿನಲ್ಲಿ 33 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ ಎಂದು ಬಹಿರಂಗಪಡಿಸಿದ್ದಾರೆ . ಇದು ದೃಢೀಕೃತ ಮಾಹಿತಿ ಎಂದು ಅವರು ಹೇಳಿದ್ದಾರೆ . 

 

ಬ್ಲ್ಯಾಕ್ ಫಂಗಸ್ ಮುಖ್ಯವಾಗಿ ಕೊರೋನಾದಿಂದ ಮುಕ್ತರಾದವರ ಮೇಲೆ ದಾಳಿ ನಡೆಸುತ್ತಿದೆ. ಅದರಲ್ಲಿಯೂ, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಶಿಲೀಂಧ್ರದ ದಾಳಿಗೆ ತುತ್ತಾಗುತ್ತಿದ್ದಾರೆ . ಮುಖ ಊಬ್ಬಿಕೊಳ್ಳುವುದು ಇದರ ಪ್ರಮುಖ ರೋಗ ಲಕ್ಷಣಗಳಲ್ಲಿ ಒಂದಾಗಿದೆ . ಬಿಸಿ ಬಿಸಿಯಾದ ಆಹಾರ ಸೇವನೆ ಮತ್ತು ಪರಿಸರ ನೈರ್ಮಲ್ಯ ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯದ ಕೆಲಸ ಎಂದು ಅವರು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು