News Karnataka Kannada
Friday, April 12 2024
Cricket
ಬೆಂಗಳೂರು ನಗರ

ಮೃತ ಸಂತೋಷ್‍ ಪಾಟೀಲ್ ಕುಟುಂಬದವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು; ಇಬ್ರಾಹಿಂ

ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಪಕ್ಷದ ರಾಷ್ಟ್ರೀಯ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಜೆಡಿಎಸ್ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ತೊಡೆತಟ್ಟಲು ಸಜ್ಜಾಗಿದ್ದಾರೆ.
Photo Credit :

ಬೆಂಗಳೂರು, ಏ.17 : ಗುತ್ತಿಗೆದಾರ ಸಂತೋಷ್‍ಪಾಟೀಲ್ ಮೃತಪಟ್ಟಿದ್ದು, ಅವರ ಕುಟುಂಬದವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.vಸಂತೋಷ್ ಪಾಟೀಲ್ ಮೃತಪಟ್ಟಿದ್ದು, ಅವರಿಗೆ ಯಾವುದೇ ಪರಿಹಾರ ನೀಡುವುದಿಲ್ಲವೆ ಎಂದು ಪ್ರಶ್ನಿಸಿದರು.

ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ಪಡೆಯುವ ವಿಚಾರವನ್ನು ವಿಧಾನ ಪರಿಷತ್‍ನಲ್ಲಿ ನಾನು ಪ್ರಸ್ತಾಪಿಸಿದ್ದೆ. ಈ ವಿಚಾರದ ಹಿನ್ನೆಲೆಯಲ್ಲೇ ಸಂತೋಷ್ ಪಾಟೀಲ್ ಮೃತಪಟ್ಟಿದ್ದು, ಮಾಜಿ ಸಚಿವ ಈಶ್ವರಪ್ಪ ಅವರ ಮೇಲೆ ಆರೋಪ ಹೊರಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಂಡು ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಹೆಸರು ಉಳಿಸುವ ಕೆಲಸ ಮಾಡಬೇಕು ಎಂದರು.

ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆ ಕೋಮು ಘರ್ಷಣೆಯಲ್ಲ. ಯಾರೂ ಕೂಡ ಸಂಘರ್ಷಕ್ಕೆ ಇಳಿಯಬಾರದು. ಘಟನೆಗೆ ಕಾರಣರಾದವರನ್ನು ಪೊಲೀಸರು ಬಂಸುವ ಕೆಲಸ ಮಾಡುತ್ತಾರೆ. ವಿನಾಕಾರಣ ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು. ಶಾಂತಿ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು