News Karnataka Kannada
Wednesday, April 24 2024
Cricket
ಬೆಂಗಳೂರು ನಗರ

ಮೈಸೂರು ದಸರಾ: ಸೆ.8ರಂದು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ

Photo Credit :

ಮೈಸೂರು ದಸರಾ: ಸೆ.8ರಂದು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ

ಬೆಂಗಳೂರು: ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯ ಮಧ್ಯೆ, ವಿಶ್ವಪ್ರಸಿದ್ಧ ಮೈಸೂರು ದಸರಾ ನಡೆಸುವ ಬಗ್ಗೆ ರಾಜ್ಯ ಸರ್ಕಾರದ ಸಂದಿಗ್ದತೆ ಮುಂದುವರಿದಿದ್ದು, ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೆ. 8 ರಂದು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ದಸರಾ ಉನ್ನತ ಸಮಿತಿಯ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‍.ಟಿ. ಸೋಮಶೇಖರ್, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹಾಗೂ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಆಚರಣೆಯ ಕ್ರಮಗಳನ್ನು ಕಡಿತಗೊಳಿಸುವ ಕುರಿತು ಅಂತಿಮ ತಿರ್ಮಾನ ತೆಗೆದುಕೊಳ್ಳಲಾಗುತ್ತದೆ.

ಮೂಲಗಳ ಪ್ರಕಾರ ಸರ್ಕಾರವು ದಸರಾವನ್ನು ಸರಳವಾಗಿ ನಡೆಸುವ ಸಾಧ್ಯತೆಯಿದೆ. ಆದಾಗ್ಯೂ ಪ್ರವಾಸೋದ್ಯಮ ಮತ್ತು ಆರ್ಥಿಕ ತಜ್ಞರು ಸ್ಥಳೀಯ ಆರ್ಥಿಕತೆಗೆ ಮರುಜೀವ ನೀಡಲು ದಸರಾವನ್ನು  ಭರ್ಜರಿಯಾಗಿ ಆಚರಿಸಬೇಕು ಎಂದು ಕೋರಿದ್ದಾರೆ.

400ಕ್ಕೂ ಹೆಚ್ಚು ಸಾವು ಮತ್ತು 13000ಕ್ಕೂ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳೊಂದಿಗೆ ಮೈಸೂರು ರಾಜ್ಯದ ಕೋವಿಡ್-19 ಪೀಡಿತ ಜಿಲ್ಲೆಗಳಲ್ಲಿ ಒಂದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು