News Karnataka Kannada
Thursday, April 18 2024
Cricket
ಬೆಂಗಳೂರು ನಗರ

ರಾಜ್ಯದಲ್ಲಿ 14 ದಿನ ಜನತಾ ಕರ್ಫ್ಯೂ, ನಾಳೆ ಸಂಜೆಯಿಂದ ಆರಂಭ: ಬಿಎಸ್

Photo Credit :

ರಾಜ್ಯದಲ್ಲಿ 14 ದಿನ ಜನತಾ ಕರ್ಫ್ಯೂ, ನಾಳೆ ಸಂಜೆಯಿಂದ ಆರಂಭ: ಬಿಎಸ್

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು ತಡೆಗಟ್ಟಲು ನಿಟ್ಟಿನಲ್ಲಿ ಹಾಗೂ ಸೋಂಕು ಹರಡುವುದನ್ನು ತಪ್ಪಿಸಲು ಸರ್ಕಾರ ಇಂದು ಕಠಿಣ ನಿರ್ಧಾರ ಕೈಗೊಂಡಿದೆ.

 

ಈಗಾಗಲೇ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿತ್ತು. ಇದೀಗ ಈ ಕರ್ಫ್ಯೂ ಮುಂದುವರೆಯಲಿದ್ದು, ರಾಜ್ಯದಲ್ಲಿ 14 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲು ಸರ್ಕಾರ ನಿರ್ಧರಿಸಿದೆ. ಈ 14 ದಿನಗಳ ಕಾಲ ಯಾವುದೇ ಬಸ್ ಸಂಚಾರ, ಮೆಟ್ರೋ ಅಥವಾ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 

 

ಇನ್ನು ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಂದರೆ ನಾಲ್ಕು ಗಂಟೆಗಳ ಕಾಲ ಅವಕಾಶ ಕಲ್ಪಿಸಿಕೊಟ್ಟಿದ್ದು, ಆ ಸಂದರ್ಭದಲ್ಲಿಯೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶಿಸಲಾಗಿದೆ. 

 

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಮಾಹಿತಿಯನ್ನು ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು