News Karnataka Kannada
Sunday, April 21 2024
Cricket
ಬೆಂಗಳೂರು ನಗರ

ರಾಜ್ಯದಲ್ಲಿ1 ಮತ್ತು 2ನೇ ತರಗತಿಗೆ ಎನ್ಇಪಿ ಜಾರಿ:ಸಚಿವ ಬಿ.ಸಿ.ನಾಗೇಶ್

Bc Nagesh.
Photo Credit :

ಬೆಂಗಳೂರು : ರಾಜ್ಯದಲ್ಲಿ 2022-23 ನೇ ಸಾಲಿನಿಂದ 1 ಮತ್ತು 2 ನೇ ತರಗತಿಗೆ  ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ ಪ್ರಾಥಮಿಕ ಅಥವಾ ಅಂಗನವಾಡಿ ಹಂತದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಬೇಕು.ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕ್ರಮ ವಹಿಸಲಿದೆ.

ಶಿಕ್ಷಣ ಇಲಾಖೆಯಿಂದ 1 ಮತ್ತು 2 ನೇ ತರಗತಿಗೆ ಈ ವರ್ಷ ಎನ್ ಇಪಿ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಶಾಲಾ ಶಿಕ್ಷಣದಲ್ಲಿ ಹೇಗೆ ಜಾರಿಗೊಳಿಸಬೇಕು, ಪಠ್ಯ ಪುಸ್ತಕ ರಚನೆ ಎಲ್ಲವನ್ನೂ ಕುರಿತು ಕರಡುನಿಯಮಾವಳಿ ರೂಪಿಸಿ ನೀಡಲು ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಸಮಿತಿ ನೀಡುವ ವರದಿ ಆಧರಿಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು