News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ರಾಜ್ಯದಾದ್ಯಂತ ಯೋಗ ಅಭಿಯಾನ ನಡೆಸುವಂತೆ ಸಿಎಂ ಬೊಮ್ಮಾಯಿ ಸಲಹೆ

Mandya: Steps will be taken to modernize Maddur branch canal: CM Bommai
Photo Credit :

ಬೆಂಗಳೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಯೋಗಾಸನ ಸ್ಪೋರ್ಟ್ಸ್‌ ಅಸೋಸಿಯೇಷನ್‌, ಶ್ವಾಸ ಯೋಗ ಸಂಸ್ಥೆ ಮತ್ತು ಪತಂಜಲಿ ಯೋಗ ಪೀಠದ ಸಹಯೋಗದಲ್ಲಿ ರಾಜ್ಯದಾದ್ಯಂತ ‘ಕರ್ನಾಟಕ ಯೋಗ ಅಭಿಯಾನ’ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಶ್ವಾಸ ಯೋಗ ಸಂಸ್ಥೆಯ ಸಂಸ್ಥಾಪಕರು ಮತ್ತು ಯೋಗಾಸನ ಸ್ಪೋರ್ಟ್ಸ್‌ ಅಸೋಸಿಯೇಷನ್‌ ಮಹಾಪೋಷಕರಾಗಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಸೋಮವಾರ ಭೇಟಿಮಾಡಿ, ರಾಜ್ಯದಲ್ಲಿ ಯೋಗ ಶಿಕ್ಷಣ ಪ್ರಚುರಪಡಿಸುವ ಕುರಿತು ಚರ್ಚಿಸಿತು. ಆಗ ಬೊಮ್ಮಾಯಿ ಈ ಸಲಹೆ ನೀಡಿತು.

‘ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಯೋಗ ಅಭಿಯಾನ ನಡೆಸುವಂತೆ ವಚನಾನಂದ ಸ್ವಾಮೀಜಿ ನೇತೃತ್ವದ ತಂಡಕ್ಕೆ ಸಲಹೆ ನೀಡಿದ್ದೇನೆ. ಈ ಸಂಬಂಧ ಶ್ವಾಸ ಯೋಗ ಸಂಸ್ಥೆ ಹಾಗೂ ಪತಂಜಲಿ ಯೋಗ ಪೀಠ ಜಂಟಿಯಾಗಿ ಸಲ್ಲಿಸುವ ಪ್ರಸ್ತಾವಕ್ಕೆ ಸರ್ಕಾರದಿಂದ ಅಗತ್ಯ ಸಹಕಾರ ಒದಗಿಸುವ ಭರವಸೆಯನ್ನೂ ನೀಡಿದ್ದೇನೆ’ ಎಂದು ಬೊಮ್ಮಾಯಿ ತಿಳಿಸಿದರು.

‘ಯೋಗ ಶಿಕ್ಷಣವನ್ನು ಇನ್ನಷ್ಟು ಪ್ರಚುರಪಡಿಸುವ ಹಾಗೂ ಎಲ್ಲ ವಯೋಮಾನದವರೂ ಯೋಗಾಭ್ಯಾಸವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲು ರಾಜ್ಯದಾದ್ಯಂದ ಯೋಗ ಅಭಿಯಾನ ನಡೆಸಲು ಉದ್ದೇಶಿಸಲಾಗಿದೆ. ಸರ್ಕಾರದಿಂದ ಅಗತ್ಯ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ವಚನಾನಂದ ಸ್ವಾಮೀಜಿ ಹೇಳಿದರು.

ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ಸ್‌ ಫೆಡರೇಷನ್‌ ಪ್ರಧಾನ ಕಾರ್ಯದರ್ಶಿ ಡಾ. ಜಯದೀಪ್‌ ಆರ್ಯ, ಕರ್ನಾಟಕ ಯೋಗಾಸನ ಸ್ಪೋರ್ಟ್ಸ್‌ ಅಸೋಸಿಯೇಷನ್ ಅಧ್ಯಕ್ಷ ಭವರ್‌ಲಾಲ್‌ ಆರ್ಯ ನಿಯೋಗದಲ್ಲಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು