News Karnataka Kannada
Tuesday, April 16 2024
Cricket
ಬೆಂಗಳೂರು ನಗರ

ಲಸಿಕೆ ವಿಚಾರವಾಗಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

Photo Credit :

ಲಸಿಕೆ ವಿಚಾರವಾಗಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಲಸಿಕೆ ವಿತರಣೆ ಕುರಿತು ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರಿಯಾಗಿ ಎಲ್ಲರಿಗೂ ವಿತರಿಸಲು ಸಾಕಾಗುವಷ್ಟು ಲಸಿಕೆ ಇಲ್ಲದಮೇಲೆ ಅಭಿಯಾನ ಶುರು ಮಾಡಿದ್ದೇಕೆ ಎಂದು ಪ್ರಶ್ನಿಸಿದೆ. 

 

  ಮೊದಲನೇ ಡೋಸ್ ಪಡೆದವರಿಗೆ ಎರಡನೇ ಡೋಸ್ ನೀಡುವಷ್ಟು ಲಸಿಕೆ ಲಭ್ಯವಿಲ್ಲ . ಇದರ ಮಧ್ಯೆ 18 ರಿಂದ 44 ವರ್ಷದವರಿಗೂ ಮೊದಲ ಡೋಸ್ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ . ಇದರ ಅಗತ್ಯ ಇತ್ತೇ ಎಂದು ಹೈಕೋರ್ಟ್ ಸರ್ಕಾರವನ್ನು ಕೇಳಿದೆ. 

 

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ನೇತೃತ್ವದ ವಿಶೇಷ ಪೀಠ , ಈ ಬಗ್ಗೆ ಚರ್ಚಿಸಿದ್ದು, ರಾಜ್ಯದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ 26 ಲಕ್ಷ ಮಂದಿ ಮೊದಲ ಡೋಸ್ ಪಡೆದು ಎರಡನೇ ಡೋಸ್‌ಗಾಗಿ ಕಾಯುತ್ತಿದ್ದಾರೆ . ಆದರೆ ರಾಜ್ಯದಲ್ಲಿ ಇರುವ ಲಸಿಕೆ ಪ್ರಮಾಣ 9.37 ಲಕ್ಷ ಮಾತ್ರ . ಈ ನಡುವೆ 18 ರಿಂದ 44 ವರ್ಷದವರಿಗೂ ಮೊದಲ ಡೋಸ್ ನೀಡಲು ಪ್ರಾರಂಭಿಸಲಾಗಿದೆ . ಇದು ಸರಿಯಾದ ಕ್ರಮವಲ್ಲ ಎಂದು ಹೇಳಿದೆ.

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು