News Karnataka Kannada
Sunday, April 14 2024
Cricket
ಬೆಂಗಳೂರು ನಗರ

ಲಾಕ್‌ಡೌನ್‌ ವಿಸ್ತರಿಸುವುದಾದ್ರೆ ಜನಹಿತದಿಂದ ಕೂಡಿರಲಿ: ಎಚ್‌.ಡಿ.ಕುಮಾರಸ್ವಾಮಿ

Photo Credit :

ಲಾಕ್‌ಡೌನ್‌ ವಿಸ್ತರಿಸುವುದಾದ್ರೆ ಜನಹಿತದಿಂದ ಕೂಡಿರಲಿ: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಲಾಕ್‌ಡೌನ್‌ ವಿಸ್ತರಿಸುವುದಾದರೆ ಅದು ಜನಹಿತದಿಂದ ಕೂಡಿರಲಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʻಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು ‘ಜನಹಿತದ ಲಾಕ್‌ಡೌನ್‌’ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್‌ಡೌನ್‌’ ಕಲ್ಪನೆಯೇ ಆಗಿತ್ತು ಎಂದು ತಿಳಿಸಿದ್ದಾರೆ.
ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ ಎಂದು ಹೇಳಿದ್ದಾರೆ.ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು ಎಂದು ಸಲಹೆ ನೀಡಿದ್ದಾರೆ.
ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ ಎಂದು ಟ್ವೀಟ್‌ ಮಾಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು