News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ವಾಹನ ತೆರಿಗೆ ಪಾವತಿಸುವವರಿಗೆ ಗಡುವು ವಿಸ್ತರಿಸಿದ ಸರ್ಕಾರ

Photo Credit :

ವಾಹನ ತೆರಿಗೆ ಪಾವತಿಸುವವರಿಗೆ ಗಡುವು ವಿಸ್ತರಿಸಿದ ಸರ್ಕಾರ

ಬೆಂಗಳೂರು, ಏಪ್ರಿಲ್ 30: ವಾಹನ ತೆರಿಗೆ ಪಾವತಿಸುವವರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಿದ್ದಾರೆ.
ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಅಧಿಸೂಚನೆ ಸಂಖ್ಯೆ ಟಿಡಿ 1 ಟಿಡಿಆರ್ 2021 ದಿನಾಂಕ: ಏಪ್ರಿಲ್ 12, 2021 ಅನ್ವಯ ದಿನಾಂಕ: ಏಪ್ರಿಲ್ 15, 2021ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಏಪ್ರಿಲ್ 30, 2021ರವರೆಗೆ ವಿಸ್ತರಿಸಿದ ಅವಧಿಯನ್ನು ಮತ್ತು ದಿನಾಂಕ: ಮೇ 15, 2021 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ದಿನಾಂಕ: ಮೇ 31, 2021 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು