News Karnataka Kannada
Sunday, April 14 2024
Cricket
ಬೆಂಗಳೂರು ನಗರ

ವಿಧಾನಪರಿಷತ್‍ನಲ್ಲಿ ಹಲವು ವಿಧೇಯಕಗಳ ಮಂಡನೆ

Photo Credit :

ವಿಧಾನಪರಿಷತ್‍ನಲ್ಲಿ ಹಲವು ವಿಧೇಯಕಗಳ ಮಂಡನೆ

ಬೆಂಗಳೂರು: ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2020ನ್ನು ಕಂದಾಯ ಸಚಿವರ ಆರ್.ಅಶೋಕ್ ಅವರ ಪರವಾಗಿ ಜೆ.ಸಿ.ಮಾಧುಸ್ವಾಮಿ ಅವರು ಮಂಡಿಸಿದರು.

ಈ ವೇಳೆ ಅವರು ಕ್ಷೇತ್ರದ ಅಭಿವೃದ್ಧಿಗಾಗಿ 3 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ತಿಳಿಸಿದರು. ಇನ್ನು ಕೈಗಾರಿಕಾ ವಿವಾದಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2020ನ್ನು ಕಾರ್ಮಿಕ ಮತ್ತು ಸಕ್ಕರೆ ಸಚಿವ ಆರಬೈಲ್ ಹೆಬ್ಬಾರ ಶಿವರಾಮ್ ಮಂಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರಾದ ನಾರಾಯಣಸ್ವಾಮಿ ಮಾತನಾಡಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸುವಂತೆ ತಿದ್ದುಪಡಿ ಮಾಡಿ ಅಂಗೀಕರಿಸಬೇಕೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ವಿಧಾನಪರಿಷತ್ ಸದಸ್ಯೆ ಡಾ. ತೇಜಸ್ವಿನ ಗೌಡ ಅವರು ಕೈಗಾರಿಕೆಗಳಿಗೆ ಕೃಷಿ ಭೂಮಿಯನ್ನು ನೀಡದೆ, ಬಂಜರು ಭೂಮಿಯನ್ನು ಅಭಿವೃದ್ಧಿಗಾಗಿ ನೀಡಬೇಕು.  ಖಾಸಗಿ ಸಂಸ್ಥೆಯವರಿಗೆ ನೀಡಿದಾಗ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಉದ್ಯೋಗ ಮತ್ತು ಜೀವನಕ್ಕೆ  ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು. 

ಇದೇ ಸಂದರ್ಭದಲ್ಲಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ 2020, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ 2020, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃಧ್ಧಿ) ವಿಧೇಯಕ (ತಿದ್ದುಪಡಿ) 2020ನ್ನು ಅಂಗೀಕರಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು