News Karnataka Kannada
Saturday, April 20 2024
Cricket
ಬೆಂಗಳೂರು ನಗರ

ವಿರೋಧ ಪಕ್ಷಗಳಿಂದ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ: ಡಿವಿಎಸ್‌

Photo Credit :

ವಿರೋಧ ಪಕ್ಷಗಳಿಂದ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ: ಡಿವಿಎಸ್‌

ಬೆಂಗಳೂರು: ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ರೈತರನ್ನು ಉದ್ದೇಶಪೂರ್ವಕವಾಗಿ ಹಾದಿತಪ್ಪಿಸುತ್ತಿವೆ. ಅನಗತ್ಯವಾಗಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ಪ್ರಚೋದಿಸುತ್ತಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಕೃಷಿ ಮಸೂದೆಗಳ ವಿರುದ್ಧ ಕರ್ನಾಟಕ ಸೇರಿದಂತೆ ದೇಶದ ಇತರೆ ಭಾಗಗಳಲ್ಲಿನ ರೈತರು ಪ್ರತಿಭಟನೆ ಮುಂದುವರಿಸುತ್ತಿರುವ ನಡುವಲ್ಲೇ ಕೇಂದ್ರ ಸಚಿವರು ಈ ಹೇಳಿಕೆ ನೀಡಿದ್ದಾರೆ.

ವಿಕಾಸಸೌಧದ ಸಮ್ಮೆಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದ್ದು, ಮಸೂದೆಗಳಲ್ಲಿ ಟೀಕಿಸಲು ವಿಪಕ್ಷ ನಾಯಕರಿಗೆ ಯಾವುದೂ ಋಣಾತ್ಮಕ ಅಂಶಗಳು ಸಿಗುತ್ತಿಲ್ಲ. ಹೀಗಾಗಿ ಕಾಯಿದೆಗಳ ವಿಚಾರವಾಗಿ ಅಪಪ್ರಚಾರ ಮಾಡುತ್ತಿದ್ದು, ದಳ್ಳಾಳಿಗಳಿಗಾಗಿ ವಿಪಕ್ಷಗಳು ಧ್ವನಿಯೆತ್ತುವ ಮೂಲಕ ಸರ್ಕಾರದ ವಿರುದ್ಧ ರೈತರನ್ನು ಎತ್ತಿಕಟ್ಟುವ ಪ್ರಯತ್ನ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರದ ಹೊಸ ಕೃಷಿ ಕಾಯ್ದೆಗಳು ರೈತರನ್ನು ಎಲ್ಲ ಬಂಧನದಿಂದ ಮುಕ್ತಗೊಳಿಸಿದ್ದು, ಮಸೂದೆಗಳು ಕೃಷಿ ಕ್ಷೇತ್ರದಲ್ಲಿ ಹೊಸ ಮನ್ವಂತರಕ್ಕೆ ಕಾರಣವಾಗಲಿವೆ. ಕನಿಷ್ಠ ಬೆಂಬಲ ಬೆಲೆ ಯೋಜನೆ – ಎಂ.ಎಸ್.ಪಿ ಯೋಜನೆಯನ್ನು ಕೈಬಿಡುವುದಿಲ್ಲ. ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಟೀಕಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು