News Karnataka Kannada
Sunday, April 14 2024
Cricket
ಬೆಂಗಳೂರು ನಗರ

ವೈದ್ಯರ ಮೇಲೆ ಹಲ್ಲೆ: ಇನ್‌ಸ್ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್‌ಗಳ ಅಮಾನತ್ತು

Photo Credit :

ವೈದ್ಯರ ಮೇಲೆ ಹಲ್ಲೆ: ಇನ್‌ಸ್ಪೆಕ್ಟರ್, ಹೆಡ್ ಕಾನ್‌ಸ್ಟೆಬಲ್‌ಗಳ  ಅಮಾನತ್ತು

ಬೆಂಗಳೂರು: ರೆಮ್‌ಡಿಸಿವಿರ್ ಚುಚ್ಚುಮದ್ದು ಅಕ್ರಮ ಮಾರಾಟದ ವಿಚಾರಣೆ ನೆಪದಲ್ಲಿ ವೈದ್ಯನ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಸಂಜಯನಗರ ಠಾಣೆ ಇನ್‌ಸ್ಪೆಕ್ಟರ್ ಕಾತ್ಯಾಯಿನಿ ಆಳ್ವ ಹಾಗೂ ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳ ತಲೆದಂಡವಾಗಿದೆ.ನಗರದ ಶ್ರೀ ಸಾಯಿ ಆಸ್ಪತ್ರೆ ವೈದ್ಯ ಡಾ. ನಾಗರಾಜ್ ಅವರನ್ನು ವಿಚಾರಣೆ ನೆಪದಲ್ಲಿ ಠಾಣೆಗೆ ಕರೆಸಿ ಅಕ್ರಮ ಬಂಧನದಲ್ಲಿರಿಸಿ ಹಲ್ಲೆ ಮಾಡಲಾಗಿತ್ತು ಎನ್ನಲಾಗಿದೆ. ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಡಾ. ನಾಗರಾಜ್, ತಮ್ಮ ಮೇಲಾದ ಹಲ್ಲೆ ಬಗ್ಗೆ ಸೋಮವಾರ ವಿಡಿಯೊ ಹರಿಬಿಟ್ಟಿದ್ದರು.
ವಿಷಯ ಗಮನಕ್ಕೆ ಬರುತ್ತಿದ್ದಂತೆ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ, ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜೆ.ಸಿ.ನಗರ ಎಸಿಪಿ ರೀನಾ ಸುವರ್ಣ ಅವರಿಗೆ ಸೂಚಿಸಿದ್ದರು. ತನಿಖೆ ಪೂರ್ಣಗೊಳಿಸಿದ್ದ ಎಸಿಪಿ, ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ ಅವರಿಗೆ ಮಂಗಳವಾರವೇ ವರದಿ ಸಲ್ಲಿಸಿದ್ದಾರೆ. ಅದೇ ವರದಿ ಆಧರಿಸಿ ಪೊಲೀಸ್ ಕಮಿಷನರ್ ಕಮಲ್ ಪಂತ್, ಇನ್‌ಸ್ಪೆಕ್ಟರ್ ಕಾತ್ಯಾಯಿನಿ ಹಾಗೂ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಮಾತನಾಡಿದ ಕಮಲ್ ಪಂತ್, ‘ಇನ್‌ಸ್ಪೆಕ್ಟರ್ ಹಾಗೂ ಇಬ್ಬರು ಸಿಬ್ಬಂದಿ ಮೇಲಿರುವ ಆರೋಪ ಪ್ರಾಥಮಿಕ ತನಿಖೆಯಿಂದ ಸಾಬೀತಾಗಿದೆ. ಮೂವರನ್ನೂ ಅಮಾನತು ಮಾಡಿ, ಅವರ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶ ಹೊರಡಿಸಲಾಗಿದೆ’ ಎಂದರು.ವೈದ್ಯರ ವಿಡಿಯೊ ಹೊರಬಂದ ಬೆನ್ನಲ್ಲೇ ಕಾತ್ಯಾಯಿನಿ ಹಾಗೂ ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳನ್ನು ಸಂಜಯನಗರ ಠಾಣೆಯಿಂದ ಎತ್ತಂಗಡಿ ಮಾಡಿ ಡಿಸಿಪಿ ಕಚೇರಿಗೆ ನಿಯುಕ್ತಿಗೊಳಿಸಲಾಗಿತ್ತು. ಇದೀಗ ಅವರನ್ನು ಸೇವೆಯಿಂದಲೇ ಅಮಾನತು ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು