News Karnataka Kannada
Sunday, April 21 2024
Cricket
ಬೆಂಗಳೂರು ನಗರ

ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಏಕಪಕ್ಷೀಯ ನಿರ್ಧಾರವಿಲ್ಲ: ಶ್ರೀರಾಮುಲು

Photo Credit :

ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಏಕಪಕ್ಷೀಯ ನಿರ್ಧಾರವಿಲ್ಲ: ಶ್ರೀರಾಮುಲು

ಬೆಂಗಳೂರು: ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಹಲವಾರು ಚರ್ಚೆಗಳು, ವಿರೋಧಗಳು ಕೇಳಿಬರುತ್ತದೆ. ಇದಕ್ಕೆ ಸ್ಪಷ್ಟೀಕರಣ ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸುದ್ದಿಗೋಷ್ಟಿ ಕರೆದಿದ್ದರು.

ಶಾಲಾ-ಕಾಲೇಜುಗಳ ಆರಂಭದ ಕುರಿತು ಚರ್ಚೆಗಳು, ಪರ-ವಿರೋಧಗಳು, ವಿಮರ್ಶೆಗಳನ್ನು ಆಲಿಸಲಾಗುತ್ತಿದೆ. ಈ ವಿಷಯವಾಗಿ ನಮ್ಮ ನಿರ್ಧಾರವೇ ಅಂತಿಮವಲ್ಲ. ಪೋಷಕರು ಹಾಗೂ ತಜ್ಞರ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಅವರ ಅಭಿಪ್ರಾಯಗಳ ಮೇಲೆ ಮುಂದಿನ ನಿರ್ಧಾರವನ್ನು ಮಾಡಲಾಗುವುದು.

ಮಕ್ಕಳ ಭವಿಷ್ಯ ಹಾಗೂ ಆರೋಗ್ಯ ಎರಡು ಮುಖ್ಯವಾಗಿರುವುದರಿಂದ ಯಾರಿಗೂ ತೊಂದರೆಯಾಗದಂತೆ ಎಲ್ಲರ ಸಹಮತದೊಂದಿಗೆ ಮುಂದುವರೆಯುವ ಆಲೋಚನೆ ನಮ್ಮ ಸರಕಾರದ್ದಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಮಾರ್ಗಸೂಚಿಯ ಮೇರೆಗೆ ಮುಂದಿನ ತೀರ್ಮಾನ ನಿರ್ಧರಿಸಲಾಗುವುದು.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿತ್ತು, ಅದರತ್ತವೂ ಗಮನಹರಿಸುವುದು ಅತ್ಯಂತ ಗಣನೀಯ ವಿಷಯವಾಗಿದೆ. ಹಾಗಾಗಿ ಹಲವಾರು ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಮುಂದಿನ ಹೆಜ್ಜೆಯನ್ನು ಇಡಬೇಕಾಗುತ್ತದೆ ಎಂದು ಶ್ರೀರಾಮುಲು ತಿಳಿಸಿದರು.

ಕೇಂದ್ರ ಸರ್ಕಾರ ಈಗಾಗಲೇ ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ತೀರ್ಮಾನವನ್ನು ತಿಳಿಸಿದ್ದು, ಶಿಕ್ಷಣ ಸಂಬಂಧಿ ವಿಷಯದ ಬಗ್ಗೆ ಆಯಾಯ ರಾಜ್ಯಕ್ಕೆ ಸಂಬಂಧಪಟ್ಟಂತೆ ನಿರ್ಧಾರ ತೆಗೆದುಕೊಳ್ಳಲು ಸಂಪೂರ್ಣ ಸ್ವತಂತ್ರ್ಯ ನೀಡಿದೆ. ಹೀಗಿರುವಾಗ ಕರ್ನಾಟಕ ಸರ್ಕಾರ ಯಾವ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಎಲ್ಲರೂ ಕಾಯುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು