News Karnataka Kannada
Sunday, April 14 2024
Cricket
ಬೆಂಗಳೂರು ನಗರ

ಶಾಲೆಗಳು ತೆರೆಯಲು ಅವಸರವಿಲ್ಲ: ಸಚಿವ ಸುರೇಶ್‍ಕುಮಾರ್

Photo Credit :

ಶಾಲೆಗಳು ತೆರೆಯಲು ಅವಸರವಿಲ್ಲ: ಸಚಿವ ಸುರೇಶ್‍ಕುಮಾರ್

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಪ್ರಸರಣದ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಹೇಳಿದ್ದಾರೆ.

ಕೊರೋನಾ ಸಾಮಾಜಿಕ ಸಂದರ್ಭದಲ್ಲಿ ಆನ್‍ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಮಾತನಾಡಿದ ಅವರು, ಈ ಸಾಮಾಜಿಕ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲವಾದರೂ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಎಲ್ಲ ಆಯಾಮಗಳಿಂದಲೂ ಪ್ರಯತ್ನ ಮಾಡಲಾಗುತ್ತದೆ ಎಂದರು.

ವಿವಿಧ ಸರ್ಕಾರೇತರ 36ಕ್ಕೂ ಹೆಚ್ಚು ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ ವೆಬಿನಾರ್‍ ನಲ್ಲಿ ಇಂತಹ ಪರಿಸ್ಥಿತಿಯಲ್ಲಿ ಯಾವ ರೀತಿಯಲ್ಲಿ ಮಕ್ಕಳ ಕಲಿಕೆಯ ನಿರಂತರತೆಗೆ ಮಾಡಬಹುದಾದ ಮತ್ತು ತಮ್ಮ ತಮ್ಮ ವ್ಯಾಪ್ತಿಯಲ್ಲಿ ತಾವು ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ಆಲಿಸಿದ ಸಚಿವರು ಇಂತಹ ಪರಿಸ್ಥಿತಿ ಇದೇ ಮೊದಲ ಬಾರಿಗೆ ಬಂದೊದಗಿರುವುದರಿಂದ ಆ ನಿಟ್ಟಿನಲ್ಲಿ ಮಕ್ಕಳನ್ನು ತಲುಪಲು ಸಾಧ್ಯವಾಗಬಹುದಾದ ಎಲ್ಲ ಪ್ರಯತ್ನಗಳನ್ನು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದರು.

ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಖಾಸಗಿ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿದಂತೆ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಶಿಕ್ಷಣ ಇಲಾಖೆ ಎಲ್ಲ ಉಪಕ್ರಮಗಳತ್ತಲೂ ಮಕ್ಕಳ ಹಿತದೃಷ್ಟಿಯಿಂದ ಯೋಚಿಸುತ್ತಿದೆ ಎಂದು ಅವರು ಹೇಳಿದರು.

ಈ ಎಲ್ಲ ಸಾಮೂಹಿಕವಾದ ಪ್ರಯತ್ನಗಳು ಗಟ್ಟಿರೂಪ ಪಡೆದು ವಿಕೇಂದ್ರಿಕೃತ ಕಲಿಕೆಯು ಮಕ್ಕಳಿಗೆ ಉಪಯುಕ್ತವಾಗುವ ರೀತಿಯಲ್ಲಿ ನಮ್ಮ ಪ್ರಯತ್ನಗಳು ಇರಬೇಕೆನ್ನುವ ಅಭಿಪ್ರಾಯಗಳು ನಾವು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯಗಳಿಗೆ ಒಂದು ಸ್ಪಷ್ಟ ದಿಕ್ಕನ್ನು ಮೂಡಿಸಿವೆ. ಈ ಎಲ್ಲ ಸಲಹೆಗಳನ್ನು ಕ್ರೂಢೀಕರಿಸಿ ದಾಖಲಿಸಿ ಆಯಾ ಸಂದರ್ಭ, ಆಯಾ ಪ್ರದೇಶಕ್ಕನುಗುಣವಾಗಿ ಜಾರಿಯಲ್ಲಿಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಸುರೇಶ್‍ಕುಮಾರ್ ಅಭಿಪ್ರಾಯಪಟ್ಟರು.

ಅಜೀಂ ಪ್ರೇಮ್‍ಜಿ ಪ್ರತಿಷ್ಠಾನ, ಗ್ರಾಮ್ಸ್, ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ, ಸಿಇಇ (ವಾಷ್ ಪ್ರೋಗ್ರಾಂ), ಪೋತ್‍ವೇವ್ ಫೌಂಡೇಷನ್, ಪ್ರಥಮ್, ಪ್ರಜಾಯತ್ನ, ಅಗಸ್ತ್ಯ ಫೌಂಡೇಷನ್, ಲೆಂಡ್ ಎ ಹ್ಯಾಂಡ್‍ಇಂಡಿಯಾ, ವೈಟ್‍ಫೀಲ್ಡ್‍ರೆಡಿ ಸಮೃದ್ಧಿ ಟ್ರಸ್ಟ್, ಇಂಡಿಯನ್ ಲಿಟ್ರೆಸಿ ಪ್ರಾಜೆಕ್ಟ್, ಬಿಜಿವಿಎಸ್, ಎಸ್‍ಟಿಐಆರ್, ಏಕ್ ಸ್ಟೆಪ್-ದೀಕ್ಷಾ, ರೂಂಟುರೀಡ್‍ಇಂಡಿಯಾಟ್ರಸ್ಟ್, ಗ್ರಾಮ್, ಐ.ಎಲ್.ಪಿ. ಸೇರಿದಂತೆ ಹಲವಾರು ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು