News Karnataka Kannada
Monday, April 22 2024
Cricket
ಬೆಂಗಳೂರು ನಗರ

ಶ್ರೀ ಮುರುಘಾ ಶರಣರ ಜನ್ಮದಿನ’ವನ್ನು ‘ಸಮಾನತೆಯ ದಿನ’ವಾಗಿ ಆಚರಣೆ:ಸಿಎಂ ಬೊಮ್ಮಾಯಿ ಘೋಷಣೆ

Cm Bommai
Photo Credit :

ಬೆಂಗಳೂರು:  ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನವನ್ನು, ಸಮಾನತೆಯ ದಿನವಾಗಿ ಆಚರಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗದ ಪರಿವರ್ತನ ಪರ ಧರ್ಮ ಸಂಸತ್ ನಲ್ಲಿ ಭಾಗವಹಿಸಿದರು.

ಚಿತ್ರದುರ್ಗದ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಬದಲು ಅವರ ಸಮಾಜಮುಖಿ ಕಾರ್ಯಗಳ ಸಾಧನೆ ಅಂಗವಾಗಿ
ಆಯೋಜಿಸಲಾಗಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಬಳಿಕ ಮಾತನಾಡಿದಂತ ಅವರು, ಮುರುಘಾ ಶರಣರ ಜನ್ಮದಿನವನ್ನು ಸಮಾನತೆಯ ದಿನವನ್ನಾಗಿ ಘೋಷಣೆ ಮಾಡಿದರು.

ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಇಂಧನ ಸಚಿವ ವಿ ಸುನಿಲ್ ಕುಮಾರ್, ಶಾಸಕ ರಾಜಶೇಖರ ಪಾಟೀಲ ತೇಲ್ಕೂರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಚಿತ್ರದುರ್ಗದ ಮುರುಘಾ ಶರಣರು, ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮಿ ಮತ್ತು ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು