News Karnataka Kannada
Tuesday, April 16 2024
Cricket
ಬೆಂಗಳೂರು ನಗರ

ಸಚಿವ ಸಂಪುಟ ವಿಸ್ತರಣೆ: ಅಮಿತ್ ಶಾ ರಾಜ್ಯಕ್ಕೆ ಬಂದಾಗಲೇ ತೀರ್ಮಾನ ಎಂದ ಸಿಎಂ

Cm Bommai
Photo Credit :

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸಂಜೆ ದೆಹಲಿ ಪ್ರವಾಸ ಕೈಗೊಂಡಿದ್ದು, ಸಿಎಂ ದೆಹಲಿ ಭೇಟಿ ವಿಚಾರದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

ದೆಹಲಿ ಪ್ರವಾಸದ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಇಂದು ಸಂಜೆ ದೆಹಲಿಗೆ ತೆರುಳಿತ್ತಿದ್ದೇನೆ. ಆದರೆ ಯಾವುದೇ ಕೇಂದ್ರ ಸಚಿವರನ್ನು,ನಾಯಕರನ್ನು ಭೇಟಿಯಾಗುತ್ತಿಲ್ಲ. ಸಂಪುಟ ವಿಸ್ತರಣೆ ವಿಚಾರ ಚರ್ಚಿಸಲು ದೆಹಲಿಗೆ ಹೋಗುತ್ತಿಲ್ಲ. ನಾಳೆ ನಡೆಯಲಿರುವ ಎಲ್ಲಾ ರಾಜ್ಯಗಳ ಸಿಎಗಳು, ಸಿಎಂ ಗಳ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.

ಮೇ 3ರಂದು ಅಮಿತ್ ಶಾ ಅವರೇ ರಾಜ್ಯಕ್ಕೆ ಆಗಮಿಸಲಿದ್ದಾರೆ. ಆ ವೇಳೆ ಸಮಯ ತೆಗೆದುಕೊಂಡು ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ. ಸಚಿವ ಸ್ಥಾನ ತುಂಬುವ ಬಗ್ಗೆ ಈಗಾಗಲೇ ವರಿಷ್ಠರ ಗಮನಕ್ಕೆ ತರಲಾಗಿದೆ. ಹೀಗಾಗಿ ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು