News Karnataka Kannada
Thursday, April 25 2024
Cricket
ಬೆಂಗಳೂರು ನಗರ

ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

Ashok Chand Gehlot
Photo Credit :

ಬೆಂಗಳೂರು:  ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.

ನಿನ್ನೆ ಶಿವಮೊಗ್ಗದಿಂದ ಬೆಂಗಳೂರಿಗೆ ರ್ಯಾಲಿ ಮೂಲಕ ಆಗಮಿಸಿದ್ದ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಈಶ್ವರಪ್ಪ ರಾಜೀನಾಮೆ ಪತ್ರ ಆಧರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಕಳುಹಿಸಿಕೊಟ್ಟಿದ್ದ ಮುಖ್ಯಮಂತ್ರಿ ಬೊಮ್ಮಾಯಿ, ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.

ಸಿಎಂ ಬೊಮ್ಮಾಯಿ ಪತ್ರವನ್ನು ಪರಿಗಣಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು