News Karnataka Kannada
Friday, April 19 2024
Cricket
ಬೆಂಗಳೂರು ನಗರ

ಸಮಾಜದ ಕೋಮು ಸಾಮರಸ್ಯ ಹಾಳು ಮಾಡುವುದನ್ನು ನಿಲ್ಲಿಸಬೇಕು; ಸಿದ್ದರಾಮಯ್ಯ

ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು. ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್‌ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ.
Photo Credit :

ಬೆಂಗಳೂರು : ‘ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ವಿರೋಧ ಸೇರಿದಂತೆ ಇತ್ತೀಚಿನ ಎಲ್ಲ ಬೆಳವಣಿಗೆಗಳು ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ. ಮುಖ್ಯಮಂತ್ರಿ ಮೌನವಾಗಿರುವುದಷ್ಟೆ ಅಲ್ಲ, ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಸರ್ಕಾರಕ್ಕೆ ಗೊತ್ತಿಲ್ಲದೆ ಆರ್.ಎಸ್.ಎಸ್ ಮತ್ತು ಬಜರಂಗದಳ ಇಷ್ಟೆಲ್ಲಾ ಮಾಡುತ್ತಾ? ಇದನ್ನು ಸರ್ಕಾರ ಹತ್ತಿಕ್ಕಬೇಕು, ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ದೇವಸ್ಥಾನ, ಮಸೀದಿ, ಚರ್ಚ್ ಹೀಗೆ ಎಲ್ಲ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಯಾರಿಗೆ ತೊಂದರೆ ಆಗಿದೆ? ಚುನಾವಣಾ ವರ್ಷ ಎಂದು ಈ ರೀತಿ ಬೇಕಂತಲೇ ತಕರಾರು ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳು ಮಾಡುವ ಪ್ರಯತ್ನಗಳು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಇಂಥ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರೂ ಬರಲ್ಲ, ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ, ರಾಜ್ಯದ ಜಿಡಿಪಿ ಬೆಳವಣಿಗೆಯಾಗಲ್ಲ’ ಎಂದರು.

‘ಸಮಾಜದ ಕೋಮು ಸಾಮರಸ್ಯ ಹಾಳು ಮಾಡುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಇದು ನಿಮಗೆ (ಬಿಜೆಪಿ) ಮುಂದೆ ತಿರುಗುಬಾಣ ಆಗಲಿದೆ’ ಎಂದೂ ಎಚ್ಚರಿಕೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು