News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಸರ್ಕಾರ ಯಾವುದೇ ಧರ್ಮದ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸ ಮಾಡಿಲ್ಲ:ಸಚಿವ ಡಾ.ಕೆ.ಸುಧಾಕರ್

Dr.sudhakar
Photo Credit : Twitter

ಬೆಂಗಳೂರು:  ಯಾವುದೇ ಧರ್ಮದ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ರಾಜ್ಯ ಸರ್ಕಾರವು ಮಾಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪ್ರತಿಯೊಂದು ಧರ್ಮವನ್ನೂ ಸಮಾನವಾಗಿ ಕಾಣುತ್ತಿದೆ.ಯಾರೊಬ್ಬರು ಕೂಡ ಮೇಲೂ ಅಲ್ಲ, ಕೀಳೂ ಅಲ್ಲ, ಅವರವರ ಧರ್ಮ ಮತ್ತು ಆಚರಣೆಗೆ ಕಾನೂನಿನಲ್ಲಿ ಅವಕಾಶವಿದೆ.

ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ಮಾಡುವುದಿಲ್ಲ ಎಂದು ಹೇಳಿದರು.ಇನ್ನು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್‌ ಮುಗ್ಧ ಹುಡುಗಿ. ದುರದೃಷ್ಟವಶಾತ್‌ ಮುಸ್ಕಾನ್‌ ಯಾಕೆ ಈ ರೀತಿ ಹೇಳಿಕೆ ಕೊಟ್ಟಳು ಎನ್ನುವುದು ಗೊತ್ತಿಲ್ಲ. ಆದರೆ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್ ಖೈದಾ ಭಯೋತ್ಪಾದಕರು ಬಳಸುತ್ತಾರೆ. ಇಂತಹ ಭಯೋತ್ಪಾದಕ ಸಂಘಟನೆಗಳಿಂದ ಹೆಚ್ಚು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು