News Karnataka Kannada
Thursday, April 18 2024
Cricket
ಬೆಂಗಳೂರು ನಗರ

ಸರ್ಟಿಫಿಕೇಟ್ ಕೊಡಿಸುವುದರಲ್ಲಿ ಬಹಳ ಅನುಭವ ಹೊಂದಿದ್ದಾರೆ ಅಶ್ವತ್ಥನಾರಾಯಣ್: ಎಚ್‌.ಡಿ.ಕೆ

H D Kumar Swamy
Photo Credit :

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್ ಅವರು ರಾಜಕೀಯಕ್ಕೆ ಬರುವ ಮೊದಲು ಸರ್ಟಿಫಿಕೇಟ್ ಕೊಡಿಸುವುದರಲ್ಲಿ ಬಹಳ ಅನುಭವ ಹೊಂದಿದ್ದಾರೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಪಾದಿಸಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ಪರೀಕ್ಷೆಯನ್ನೇ ಬರೆಯದ ದಾದಿಯರಿಗೆ(ನರ್ಸ್‌) ಸರ್ಟಿಫಿಕೇಟ್ ಕೊಡಿಸಿದ್ದರು ಎಂಬ ಆರೋಪ ಅಶ್ವತ್ಥನಾರಾಯಣ ಮೇಲಿತ್ತು.

ಕಾಂಗ್ರೆಸ್ ನಾಯಕರು ಈ ವಿಚಾರದ ಪ್ರಸ್ತಾಪವನ್ನೇ ಮಾಡುತ್ತಿಲ್ಲ ಎಂದು ಹಂಗಿಸಿದರು.

ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್(ಪಿಎಸ್‌ಐ) ನೇಮಕಾತಿಗಾಗಿ ಹಲವರು ಸಾಕಷ್ಟು ಹಣ ನೀಡಿದ್ದಾರೆ. ಅವರು ಈಗ ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಎಲ್ಲ ವಿಷಯದಲ್ಲೂ ಸರ್ಕಾರ ವಹಿಸಿರುವ ಮೌನ ನೋಡಿದರೆ ಸರ್ಕಾರ ನಡೆಸುತ್ತಿರುವವರು ಇದರಲ್ಲಿ ಪಾಲುದಾರರೇ ಎಂಬ ಸಂಶಯ ಮೂಡುತ್ತದೆ ಎಂದರು.

ಡ್ರಗ್ಸ್‌ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಮಗನ ಪ್ರಭಾವ ಇದೆ ಎಂದು ಹೇಳಲಾಗಿತ್ತು. ಆ ಪ್ರಕರಣದ ತನಿಖೆ ಒಂದು ಹಂತದವರೆಗೆ ಹೋಗಿ, ಅಲ್ಲಿಯೇ ಮುಚ್ಚಿಹೋಯಿತು. ಪಿಎಸ್‌ಐ ನೇಮಕಾತಿ ಅಕ್ರಮದಲ್ಲೂ ಅದೇ ಆಗಬಹುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು