News Karnataka Kannada
Sunday, April 14 2024
Cricket
ಬೆಂಗಳೂರು ನಗರ

ಸಾಲುಮರದ ತಿಮ್ಮಕ್ಕ‌ ಅವರಿಗೆ ಮತ್ತೆ ಪೆಟ್ಟು; ಆಸ್ಪತ್ರೆಯಲ್ಲಿ ಹಾಸಿಗೆಗೆ ಪರದಾಟ

Photo Credit :

ಸಾಲುಮರದ ತಿಮ್ಮಕ್ಕ‌ ಅವರಿಗೆ ಮತ್ತೆ ಪೆಟ್ಟು; ಆಸ್ಪತ್ರೆಯಲ್ಲಿ ಹಾಸಿಗೆಗೆ ಪರದಾಟ

ಬೆಂಗಳೂರು, : ಈಚೆಗಷ್ಟೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ವೃಕ್ಷಮಾತೆ ಖ್ಯಾತಿಯ ಸಾಲುಮರದ ತಿಮ್ಮಕ್ಕ ಅವರಿಗೆ ಮತ್ತೆ ಪೆಟ್ಟು ಬಿದ್ದಿದ್ದು, ನಾನ್ ಕೋವಿಡ್ ಹಾಸಿಗೆಗಾಗಿ ಪರದಾಡುವ ಸ್ಥಿತಿ ಏರ್ಪಟ್ಟಿತ್ತು.
ಕಳೆದ ಡಿಸೆಂಬರ್‌ನಲ್ಲಿ ಮನೆಯಲ್ಲಿ ಜಾರಿ ಬಿದ್ದು ಅವರ ಬೆನ್ನುಮೂಳೆ ಮುರಿತವಾಗಿದ್ದು, ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಮತ್ತೆ ಅದೇ ಜಾಗಕ್ಕೆ ತೀವ್ರ ಏಟು ಬಿದ್ದಿದ್ದು, ಆಸ್ಪತ್ರೆಗೆ ದಾಖಲಾಗಲು ಎರಡು ಗಂಟೆಯಿಂದ ಪರದಾಡುವಂತಾಯಿತು.
ಸದ್ಯಕ್ಕೆ ಬೆಂಗಳೂರಿನ ಬಹುಪಾಲು ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳು ತುಂಬಿ ತುಳುಕುತ್ತಿರುವುದರಿಂದ ನಾನ್‌ ಕೋವಿಡ್ ಆಸ್ಪತ್ರೆಗಳು ಲಭ್ಯವಾಗಿಲ್ಲ. ಹೀಗಾಗಿ ಸತತ ಎರಡು ಗಂಟೆಗಳಿಂದಲೂ ಹುಡುಕಾಟ ನಡೆಸಲಾಗಿತ್ತು. ತಿಮ್ಮಕ್ಕ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದ ಅಪೋಲೋ ಆಸ್ಪತ್ರೆ ವೈದ್ಯರೂ ನಾನ್ ಕೋವಿಡ್ ಹಾಸಿಗೆ ಹೊಂದಿಸಲು ನಿರಂತರ ಪ್ರಯತ್ನಿಸಿದ್ದರು.ಅಂತಿಮವಾಗಿ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಹಾಸಿಗೆ ಒದಗಿಸಲಾಗಿದೆ. ಸದ್ಯಕ್ಕೆ ಎಮರ್ಜೆನ್ಸಿ ವಾರ್ಡ್ ಗೆ ಶಿಫ್ಟ್ ಮಾಡಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು