News Karnataka Kannada
Friday, April 19 2024
Cricket
ಬೆಂಗಳೂರು ನಗರ

ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್. ಈಶ್ವರಪ್ಪ

Photo Credit :

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒತ್ತಡಕ್ಕೆ ಸಿಲುಕಿದ ಕೆ.ಎಸ್. ಈಶ್ವರಪ್ಪ ಕೊನೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶಿವಮೊಗ್ಗದಿಂದ ಇಂದು ರಾತ್ರಿ ನಗರಕ್ಕೆ ಆಗಮಿಸಿದ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಇಲ್ಲದ ಕಾರಣ ಸೋಮವಾರ ರಾಜೀನಾಮೆ ಅಂಗೀಕಾರವಾಗುವ ಸಾಧ್ಯತೆಯಿದೆ.

ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವ ವೇಳೆ ಸಿಎಂ ನಿವಾಸದ ಬಳಿ ಹೈಡ್ರಾಮವೇ ನಡೆಯಿತು. ಅಪಾರ ಪ್ರಮಾಣದಲ್ಲಿ ನೆರೆದಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಸಲ್ಲಿಸದಂತೆ ಘೋಷಣೆ ಕೂಗಿದರು. ಈಶ್ವರಪ್ಪ ರಾಜೀನಾಮೆ ಸಲ್ಲಿಕೆ ವೇಳೆ ಕುರುಬ ಸಮುದಾಯದ ಸಚಿವರಾದ ಬೈರತಿ ಬಸವರಾಜ ಹಾಗೂ ಎಂಟಿಬಿ ನಾಗರಾಜ್ ಉಪಸ್ಥಿತರಿದ್ದರು.

ಸಂತೋಷ್ ಪಾಟೀಲ್ ತನ್ನ ಸಾವಿಗೆ ಕೆ. ಎಸ್. ಈಶ್ವರಪ್ಪ ಅವರೇ ನೇರ ಕಾರಣ ಎಂದು ವಾಟ್ಸಾಪ್ ನಲ್ಲಿ ಸಂದೇಶ ರವಾನಿಸಿ ಉಡುಪಿಯಲ್ಲಿ ಲಾಡ್ಜ್ ವೊಂದರಲ್ಲಿ ನೇಣಿಗೆ ಶರಣಾಗಿದ್ದರು. ತದನಂತರ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಮೃತನ ಸಂಬಂಧಿಕರು ಆಗ್ರಹಿಸಿದ್ದರು.

ಪ್ರತಿಪಕ್ಷ ಕಾಂಗ್ರೆಸ್ ಅಹೋರಾತ್ರಿ ಪ್ರತಿಭಟನೆ ನಡೆಸುತಿತ್ತು. ನಾಳೆಯಿಂದ ಎರಡು ದಿನ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದ್ದು, ಪಕ್ಷಕ್ಕೆ ಆಗುವ ಮುಜುಗರವನ್ನು ತಪ್ಪಿಸುವ ದೃಷ್ಟಿಯಿಂದ ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು