News Karnataka Kannada
Sunday, April 21 2024
Cricket
ಬೆಂಗಳೂರು ನಗರ

ಸಿಎಂ ವಿರುದ್ಧವೇ ತೇಜಸ್ವಿ ಅವರಿಂದ ಭ್ರಷ್ಟಾಚಾರ, ಪರೋಕ್ಷ ಹತ್ಯೆ ಆರೋಪ: ಕಾಂಗ್ರೆಸ್

Photo Credit :

ಸಿಎಂ ವಿರುದ್ಧವೇ ತೇಜಸ್ವಿ ಅವರಿಂದ ಭ್ರಷ್ಟಾಚಾರ, ಪರೋಕ್ಷ ಹತ್ಯೆ ಆರೋಪ: ಕಾಂಗ್ರೆಸ್

ಬೆಂಗಳೂರು: ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ದುಬಾರಿ ಬೆಲೆಗೆ ಬೇರೊಬ್ಬರಿಗೆ ಮಾರಾಟ ಮಾಡುತ್ತಿದ್ದ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ಹಾಗೂ ಸರ್ಕಾರದ ಶಾಸಕರು ಬಯಲು ಮಾಡಿದ್ದು, ತಪ್ಪಿತ್ತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಸಂಸದ ತೇಜಸ್ವಿ ಅವರು ಸಿಎಂ ಯಡಿಯೂರಪ್ಪ ಹಾಗೂ ಸಚಿವರ ವಿರುದ್ಧ ಭ್ರಷ್ಟಾಚಾರ ಹಾಗೂ ಪರೋಕ್ಷ ಹತ್ಯೆ ಆರೋಪ ಮಾಡಿದ್ದಾರೆ. ಎಂತಹ ನಾಟಕ ಎಂದು ಹೇಳಿದೆ.
ಸಂಸದ @Tejasvi_Surya , ಅವರ ಸಂಬಂಧಿ ಶಾಸಕ ಮತ್ತು ಮತ್ತಿಬ್ಬರು ಶಾಸಕರು ಇಂದು ಆಸ್ಪತ್ರೆಯಲ್ಲಿ ಹಾಸಿಗೆ ಹಗರಣದ ಬಗ್ಗೆ ಆರೋಪಿಸಿದ್ದಾರೆ.
ಬಿಬಿಎಂಪಿ, ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ.ತೇಜಸ್ವಿ ಅವರು ಸಿಎಂ ಯಡಿಯೂರಪ್ಪ ಹಾಗೂ ಸಚಿವರ ವಿರುದ್ಧ ಭ್ರಷ್ಟಾಚಾರ ಹಾಗೂ ಪರೋಕ್ಷ ಹತ್ಯೆ ಆರೋಪ ಮಾಡಿದ್ದಾರೆ. ಎಂತಹ ನಾಟಕ!
ರಾಜ್ಯದಲ್ಲೂ ಕೇಂದ್ರದಲ್ಲೂ ಬಿಬಿಎಂಪಿಯಲ್ಲೂ ಬಹುತೇಕ ಬೆಂಗಳೂರು ಎಂಪಿಗಳೂ ಎಲ್ಲರೂ ಬಿಜೆಪಿಯವರೇ! ಒಬ್ಬರಲ್ಲ ಎಂದು ಮೂರು ಡಿಸಿಎಂಗಳು. ಅಧಿಕಾರವೆಲ್ಲ ತಮ್ಮ ಕೈಲಿದ್ದು ಸಹ ಬಿಜೆಪಿಯ ಎಂಪಿಗಳು, ಶಾಸಕರು ಪ್ರೆಸ್ ಮೀಟ್ ಮಾಡಿ ತಮ್ಮದೇ ಸರ್ಕಾರದ ವೈಫಲ್ಯತೆ, ಭ್ರಷ್ಟಾಚಾರವನ್ನು ಹೇಳುತ್ತಿದ್ದಾರೆ ಎಂದರೆ ಇದು ತೀರ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು