News Karnataka Kannada
Saturday, April 20 2024
Cricket
ಬೆಂಗಳೂರು ನಗರ

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಿಎಂಟಿಸಿ ಬಸ್​ಗೆ​ ಬೆಂಕಿ

ಬದ್ಲಾಪುರದ ಎಂಐಡಿಸಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ಪ್ರಾಣಕಳೆದುಕೊಂಡಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Photo Credit : IANS

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಶೇಷಾದ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ನಗರ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

2014 ರಲ್ಲಿ 186 ಅಶೋಕ್ ಲೇಲ್ಯಾಂಡ್ ಬಸ್​ಗಳನ್ನ ಖರೀದಿ ಮಾಡಲಾಗಿತ್ತು. ಇತ್ತೀಚಿಗೆ ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದ ಬಳಿ ಎರಡು ಮಿನಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ದೂರು ನೀಡಿದ್ದರು. ಎಂಜಿನಿಯರ್‌ಗಳು ಬಂದು ಎಲ್ಲ ಬಸ್‌ಗಳನ್ನು ತಪಾಸಣೆ ಮಾಡಿ ಸಮಸ್ಯೆ ಬಗಹರಿಸಿದ್ದರು. ಬಳಿಕವೇ ಬಸ್‌ಗಳನ್ನು ಮತ್ತೆ ರೋಡ್‌ಗೆ ಇಳಿಸಲಾಗಿತ್ತು. ಆದರೆ, ಇದೀಗ ಮತ್ತೊಂದು ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಆತಂಕದ ಮನೆ ಮಾಡಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು