News Karnataka Kannada
Tuesday, April 16 2024
Cricket
ಬೆಂಗಳೂರು ನಗರ

ಸೋಮವಾರದ ಬಂದ್ ಗೆ ಸರ್ಕಾರದ ಬೆಂಬಲವಿಲ್ಲ: ಯಡಿಯೂರಪ್ಪ

Photo Credit :

ಸೋಮವಾರದ ಬಂದ್ ಗೆ ಸರ್ಕಾರದ ಬೆಂಬಲವಿಲ್ಲ: ಯಡಿಯೂರಪ್ಪ

ಬೆಂಗಳೂರು: ರೈತ ಸಂಘಟನೆಗಳ ಒಕ್ಕೂಟವು ಕರೆ ನೀಡಿರುವ ಸೋಮವಾರದ ಬಂದ್‌ಗೆ ಸರ್ಕಾರದಿಂದ ಯಾವುದೇ ರೀತಿಯಲ್ಲೂ ಬೆಂಬಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತರ ಪರವಾಗಿ ನಿರಂತರ ಕೆಲಸ ಮಾಡುತ್ತಿದೆ. ರೈತರ ಒಳಿತಿಗಾಗಿಯೇ ಕೆಲವು ಕಾಯ್ದೆಗಳಿಗೆ ತಿದ್ದುಪಡಿ ತರುತ್ತಿದೆ. ಈ ವಿಷಯವನ್ನು ರೈತ ಸಂಘಟನೆಗಳ ಮುಖಂಡರಿಗೂ ಮನವರಿಕೆ ಮಾಡಲಾಗಿದೆ. ಈ ಬಂದ್‌ಗೆ ಸರ್ಕಾರ ಬೆಂಬಲ ಇಲ್ಲ’ ಎಂದು ತಿಳಿಸಿದರು.
ರೈತರು ತಮ್ಮ ಉತ್ಪನ್ನಗಳಿಗೆ ಒಳ್ಳೆಯ ಬೆಲೆ ಪಡೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕೃಷಿ ಉತ್ಪನ್ನ ಮಾರುಟ್ಟೆ ವ್ಯವಹಾರ ನಿಯಂತ್ರಣ (ಎಪಿಎಂಸಿ) ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ಎಲ್ಲ ವಿಚಾರಗಳನ್ನೂ ರೈತ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮನವರಿಕೆ ಮಾಡಲಾಗಿದೆ ಎಂದು ಹೇಳಿದರು.
ಸೋಮವಾರದ ಬಂದ್‌ ಕರೆಯನ್ನು ಸರ್ಕಾರ ಬೆಂಬಲಿಸುವುದಿಲ್ಲ. ಬಂದ್‌ ವಿಚಾರದಲ್ಲಿ ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ಗಳು ನೀಡಿರುವ ನಿರ್ದೇಶನಗಳನ್ನು ನಾವು ಪಾಲಿಸುತ್ತೇವೆ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು