News Karnataka Kannada
Saturday, April 13 2024
Cricket
ಬೆಂಗಳೂರು ನಗರ

ಹಿಜಾಬ್‌ ಧರಿಸಿ ಪರೀಕ್ಷಾ ಕಾರ್ಯ ನಿರ್ವಹಿಸಲು ಶಿಕ್ಷಕರಿಗೆ ಅವಕಾಶವಿಲ್ಲ; ಬಿ.ಸಿ.ನಾಗೇಶ್

Bc Nagesh
Photo Credit :

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಹಿಜಾಬ್‌ ಧರಿಸಿ ಪರೀಕ್ಷಾ ಕಾರ್ಯ ನಿರ್ವಹಿಸಲು ಯಾವುದೇ ಶಾಲಾ-ಕಾಲೇಜು ಶಿಕ್ಷಕರಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ. ಸರ್ಕಾರಿ ನೌಕರರಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದ್ರೆ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ ಹಾಕಲು ಅವಕಾಶವಿಲ್ಲ ಎಂದಿದ್ದಾರೆ.

ನೈತಿಕ ದೃಷ್ಟಿಯಿಂದ ಶಿಕ್ಷಕರು ಕೂಡ ಹಿಜಾಬ್ ಧರಿಸಬಾರದು. ಹಾಗಂತ ನಾವೇನೂ ಶಿಕ್ಷಕರನ್ನು ಹಿಜಾಬ್​ ಧರಿಸಬೇಡಿ ಎಂದು ಒತ್ತಾಯಿಸುವುದಿಲ್ಲ. ಒಂದು ವೇಳೆ ಅವರು ಧರಿಸುವುದಾದ್ರೆ, ನಾವು ಅವರನ್ನು ಪರೀಕ್ಷಾ ಕೆಲಸದಿಂದ ವಿಮುಕ್ತಿಗೊಳಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ. ಇದೀಗ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಏಪ್ರಿಲ್ ಮಧ್ಯದವರೆಗೆ ಮುಂದುವರಿಯುತ್ತದೆ. ಮತ್ತೊಂದೆಡೆ, ಈ ತಿಂಗಳ ಕೊನೆಯಲ್ಲಿ ಪಿಯು ಪರೀಕ್ಷೆಗಳು ಸಹ ಪ್ರಾರಂಭವಾಗುತ್ತವೆ.

ಕಳೆದ ವಾರ ಮೈಸೂರಿನಲ್ಲಿ ಶಿಕ್ಷಕಿಯೊಬ್ಬರು ಹಿಜಾಬ್ ಧರಿಸಿ ಪರೀಕ್ಷಾ ಕಾರ್ಯ ಮಾಡುವುದಾಗಿ ಹೇಳಿದ್ದರಿಂದ, ಅವರಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಿರಲಿಲ್ಲ. ರಾಜ್ಯಾದ್ಯಂತ, ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರನ್ನು ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು