News Karnataka Kannada
Friday, May 03 2024
ಬೆಂಗಳೂರು ನಗರ

ಅಕ್ರಮವಾಗಿ ನಡೆಸುತ್ತಿದ್ದ ಸ್ಪಾಗಳ ಮೇಲೆ ಸಿಸಿಬಿ ದಾಳಿ: ಇಬ್ಬರು ಬಂಧನ

Mangaluru: Restrictions extended for two more days in mangaluru
Photo Credit : IANS

ಬೆಂಗಳೂರು : ಅಕ್ರಮವಾಗಿ ನಡೆಸುತ್ತಿದ್ದ ಮೂರು ಸ್ಪಾಗಳ ಮೇಲೆ ದಾಳಿ ನಡೆಸಿರುವ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಇಬ್ಬರನ್ನು ಬಂಧಿಸಿ, ಇಬ್ಬರು ವಿದೇಶಿಯರು ಸೇರಿ 13 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ.

ಉತ್ತರ ಭಾರತ ಮೂಲದ ದೇವೆಂದರ್‌(36) ಮತ್ತು ಅಭಿಜಿತ್‌(40) ಬಂಧಿತರು. ಆರೋಪಿಗಳು ಕೆಲಸದ ಆಮಿಷವೊಡ್ಡಿ ಬೇರೆ ಬೇರೆ ರಾಜ್ಯಗಳಿಂದ ಮಹಿಳೆಯರು, ಯುವತಿಯರನ್ನು ಕರೆತಂದು ಅವರನ್ನು ನಗರದ ಸ್ಪಾಗಳಲ್ಲಿ ಅಕ್ರಮ ಚಟುವಟಿಕೆಗಳಿಗೆ ದೂಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಫೆ.3 ಹಾಗೂ 4ರಂದು ರಾಯಲ್ ಸ್ಪಾ ಆಯಂಡ್ ಸಲೂನ್, ಅಸ್ತೇಟಿಕ್‌ ಯೂನಿಸೆಕ್ಸ್‌ ಸೆಲೂನ್‌ ಆಯಂಡ್ ಸ್ಪಾ, ನಿಸರ್ಗ ಆಯುರ್ವೇದಿಕ್‌ ಕ್ಲಿನಿಕ್‌ ಮೇಲೆ ದಾಳಿ ನಡೆಸಿದ್ದರು.

ಆ ವೇಳೆ ಸ್ಪಾಗಳಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ, ಟರ್ಕಿ ದೇಶದ ಇಬ್ಬರು ಮಹಿಳೆಯರು, ನಾಗಾಲ್ಯಾಂಡ್‌ನ‌ ಇಬ್ಬರು, ಅಸ್ಸಾಂನ ಮೂವರು ಮಹಿಳೆಯರು, ದೆಹಲಿಯ ಒಬ್ಬರು, ಪಶ್ಚಿಮ ಬಂಗಾಳದ ಮೂವರು ಹಾಗೂ ಸ್ಥಳೀಯ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಅಲ್ಲದೇ, ಅಕ್ರಮ ಚಟುವಟಿಕೆ ನಡೆಸಲು ಸಹಕಾರ ನೀಡಿ ಪ್ರಕರಣದಲ್ಲಿ ಭಾಗಿಯಾಗಿದ್ದ 9 ಮಂದಿ ವಿರುದ್ಧ ಎಚ್‌ಎಸ್‌ಆರ್‌ ಲೇಔಟ್‌, ಅಶೋಕನಗರ ಹಾಗೂ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು